ಭಾನುವಾರ, ಏಪ್ರಿಲ್ 11, 2021
27 °C
100ನೇ ದಿನಕ್ಕೆ ಕಾಲಿಟ್ಟ ಧರಣಿ

ಕಾಲುವೆ ನಿರ್ಮಾಣಕ್ಕೆ ಅನುದಾನ ಮೀಸಲಿಡಿ: ರೈತರಿಂದ ಬೈಕ್‌ ರ‍್ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ನಾರಾಯಣಪುರ ಬಲದಂಡೆ 5 (ಎ) ಕಾಲುವೆ ನಿರ್ಮಾಣ ಯೋಜನೆಗೆ ಸರ್ಕಾರ ಬಜೆಟ್‌ನಲ್ಲಿ ₹500 ಕೋಟಿ ಮೀಸಲಿಡಬೇಕು ಎಂದು ಒತ್ತಾಯಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಸಿದರು.

ಯೋಜನೆ ಜಾರಿಗೆ ಒತ್ತಾಯಿಸಿ ತಾಲ್ಲೂಕಿನ ಪಾಮನಕೆಲ್ಲೂರು ಗ್ರಾಮದಲ್ಲಿ ನಡೆಯುತ್ತಿರುವ ಧರಣಿ ಶನಿವಾರ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಸತ್ಯಾಗ್ರಹ ಸ್ಥಳದಿಂದ ಪಟ್ಟಣದ ಬಸವೇಶ್ವರ ವೃತ್ತದವರೆಗೆ ರ‍್ಯಾಲಿ ನಡೆಸಲಾಯಿತು.

‘12 ವರ್ಷಗಳಿಂದ 5 (ಎ) ಕಾಲುವೆ ನಿರ್ಮಾಣ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷದ ಸ್ಥಾನದಲ್ಲಿದ್ದಾಗ ಹೋರಾಟ ಸಮಿತಿ ಮನವಿಗೆ ಸ್ಪಂದಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈಗ ಮುಖ್ಯಮಂತ್ರಿಯಾಗಿದ್ದಾರೆ. ಕೂಡಲೇ ಬೇಡಿಕೆ ಈಡೇರಿಸಬೇಕು’ ಎಂದು ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪೂರ ಒತ್ತಾಯಿಸಿದರು.

ಬಸವೇಶ್ವರ ನಗರದ ತಹಶೀಲ್ದಾರ್ ಕಚೇರಿ ಎದುರು ರೈತರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮುಖಂಡ ಎಚ್.ಬಿ.ಮುರಾರಿ, ಕಾರ್ಯದರ್ಶಿ ನಾಗಿರೆಡ್ಡಿ ದೇವರಮನಿ ಹಾಗೂ ರೈತರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು