ಸೋಮವಾರ, ಜನವರಿ 18, 2021
15 °C

‘ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ಆರಂಭಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜನವರಿ 1ರಿಂದ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಶೀಘ್ರವೇ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೋವಿಡ್ ಹಿನ್ನಲೆಯಲ್ಲಿ ಶಾಲಾ– ಕಾಲೇಜುಗಳು 9 ತಿಂಗಳುಗಳ ಕಾಲ ಸಂಪೂರ್ಣ ಸ್ತಬ್ದವಾಗಿದ್ದು, ಪ್ರಸ್ತುತ ಶಾಲಾ ಕಾಲೇಜುಗಳು ಪುನರ್‌ ಆರಂಭಗೊಂಡಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಗರಕ್ಕೆ ಆಗಮಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆಯಾಗಿದೆ. ಜಿಲ್ಲಾಡಳಿತ ಎಲ್ಲಾ ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಭಾಗದ ಬಹುತೇಕ ವಿದ್ಯಾರ್ಥಿಗಳು ರೈತ ಕುಟುಂಬದವರಾಗಿದ್ದು ಅವರ ಜೀವನ ತೀರ ದುಸ್ತರವಾಗಿದೆ. ಅವರ ವಿದ್ಯಾಭ್ಯಾಸ ಇನ್ನು ಮುಂದಾದರೂ ಸುಗಮವಾಗಿ ನಡೆಯಲು ತಕ್ಷಣದಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಎನ್.ಲಕ್ಷ್ಮಣಗೌಡ ಕಡಗಂದೊಡ್ಡಿ, ತಾಲ್ಲೂಕು ಅಧ್ಯಕ್ಷ ದೇವರಾಜ ನಾಯಕ, ಪದಾಧಿಕಾರಿಗಳಾದ ಶ್ರೀಧರ, ನರಸಪ್ಪ ಯಾದವ್ ಹೊಕ್ರಾಣಿ, ಹುಲಿಗಪ್ಪ ಜಾಲಿಬೆಂಚಿ, ಡಿ.ಕೆ.ಖಾಸೀಮ್, ದೇವಕುಮಾರ, ಮಲ್ಲಿಕಾರ್ಜುನ ಮಮದಾಪೂರ, ಅಯ್ಯಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು