ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಡಿಎ ಪರೀಕ್ಷೆ: ಜಿಲ್ಲೆಯಲ್ಲಿ ಶಾಂತಿಯುತ

Last Updated 28 ಫೆಬ್ರುವರಿ 2021, 14:40 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ 54 ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಭಾನುವಾರ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗಳು ಶಾಂತಿಯುತವಾಗಿ ನಡೆದವು.

ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿನೀಡಿ ಪರೀಕ್ಷಾ ಪ್ರಕ್ರಿಯೆಗಳು, ಕೋವಿಡ್-19 ಸೋಂಕು ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಮಾಸ್ಕ್ ಹಾಕದಿದ್ದ ಅಭ್ಯರ್ಥಿಗೆ ಸ್ಥಳದಲ್ಲಿಯೇ ಮಾಸ್ಕ್ ಧರಿಸಿದ ನಂತರವೇ ಪರೀಕ್ಷೆ ಬರೆಯಲು ಸೂಚಿಸಿದರು.

ಕೊಠಡಿಯಲ್ಲಿದ್ದ ಪಠ್ಯ ಪುಸ್ತಕ ಹಾಗೂ ನೋಟ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಿದ್ದ ಸಿಟ್ಟಿಂಗ್ ಸ್ಕ್ವಾಡ್ ಹೊನಕೇರಪ್ಪ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಅವರ ವಿರುದ್ಧ ಕ್ರಮಕ್ಕೆ ಲಿಖಿತವಾಗಿ ನಿರ್ದೇಶನ ನೀಡಿದರು.

ಒಟ್ಟು 16,999 ಅಭ್ಯರ್ಥಿಗಳು ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಮೊದಲ ಪತ್ರಿಕೆಯ ಪರೀಕ್ಷೆಗೆ 11,465 ಅಭ್ಯರ್ಥಿಗಳು ಹಾಜರಾಗಿದ್ದರು.ಎರಡನೇ ಪತ್ರಿಕೆ ಪರೀಕ್ಷೆಗೆ ಒಟ್ಟು 5,549 ಗೈರುಹಾಜರಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT