ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಧರಿಸದವರಿಗೆ ದಂಡ

Last Updated 30 ಏಪ್ರಿಲ್ 2021, 13:16 IST
ಅಕ್ಷರ ಗಾತ್ರ

ಶಕ್ತಿನಗರ: ದೇವಸೂಗೂರು ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿ ಮಾಸ್ಕ್ ಧರಿಸದವರಿಗೆ ಶುಕ್ರವಾರ ದಂಡ ವಿಧಿಸಿದರು.

ಪ್ರತಿಯೊಬ್ಬರೂ ಹೊರಗಡೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜನ ಗುಂಪು ಸೇರಬಾರದು. ಈ ಮೂಲಕ ಸೋಂಕು ಹರಡುವಿಕೆ ನಿಯಂತ್ರಿಸಬೇಕು ಎಂದು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಯಿತು.

ಗ್ರಾಮ ಪಂಚಾಯಿತಿ ಅಧಿಕಾರಿಗಳ ಸೂಚನೆ ಮೇರೆಗೆ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಶಕ್ತಿನಗರದಲ್ಲಿ ತರಕಾರಿ ಮಾರಾಟ ಮಾಡಲು ಬಂದ ವ್ಯಾಪಾರಸ್ಥರು, ಮಾಸ್ಕ್ ಹಾಕದವರಿಗೆ ದಂಡ ವಿಧಿಸಿದರು. ₹1,100 ದಂಡ ಸಂಗ್ರಹಿಸಿದರು.

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತಪಾಸಣೆ ನಡೆಸಲಾಗುವುದು ಎಂದು ದೇವಸೂಗೂರು ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್ ಸೂಗಪ್ಪ ಮ್ಯಾತ್ರಿ ಅವರು ಹೇಳಿದರು. ಸಿಬ್ಬಂದಿ ಖಾಸೀಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT