ಶುಕ್ರವಾರ, ಮೇ 14, 2021
31 °C

ಮೇವು ತುಂಬಿದ ಟ್ರ್ಯಾಕ್ಟರ್‌ಗೆ ಬೆಂಕಿ: ಎಂಜಿನ್ ಬೇರ್ಪಡಿಸಿದ ಚಾಲಕನ ಸಾಹಸ ನೋಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಮೇವು ಸಾಗಿಸುವ ಟ್ರ್ಯಾಕ್ಟರ್‌ನಲ್ಲಿ ಬೆಂಕಿ ಅವಘಡ ಘಟನೆಗಳು ಮರುಕಳಿಸುತ್ತಿವೆ.

ಶಕ್ತಿನಗರ ಬಳಿಯ ಯರಗುಂಟ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೇವು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ನಡೆದಿದೆ. 

ಮೇವು ಯರಗುಂಟ ಗ್ರಾಮದ ತಿಮ್ಮಾರೆಡ್ಡಿ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ₹ 50 ಸಾವಿರ ನಷ್ಟ ಉಂಟಾಗಿದೆ.

ಮೇವಿಗೆ ವಿದ್ಯುತ್ ತಂತಿ ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಟ್ರ್ಯಾಕ್ಟರ್ ಚಾಲಕ ಎಂಜಿನ್ ಬೇರ್ಪಡಿಸಿದ ಸಾಹಸದ ವಿಡಿಯೋ ವೈರಲ್‌ ಆಗಿದೆ.

ಯಾವುದೇ ಜೀವಕ್ಕೆ ಹಾನಿಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ರಾಯಚೂರು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು