ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತ್ಯೇಕ ಬೆಂಕಿ ಅವಘಡ; ಸಿಮೆಂಟ್‌ ಲಾರಿಗೆ ಬೆಂಕಿ, ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ

Published 7 ಮಾರ್ಚ್ 2024, 4:56 IST
Last Updated 7 ಮಾರ್ಚ್ 2024, 4:56 IST
ಅಕ್ಷರ ಗಾತ್ರ

ರಾಯಚೂರು: ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡದಲ್ಲಿ ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮವಾಗಿದೆ. ಲಾರಿಗೆ ಬೆಂಕಿ ಹೊತ್ತಿಕೊಂಡು ಸಿಮೆಂಟ್‌ ಚೀಲಗುಳು ಸುಟ್ಟಿವೆ.

ನಗರದ ಹೊರವಲಯದ ಬೈಪಾಸ್ ರಸ್ತೆ ಬಳಿಯ ಜಿ.ಆರ್ ಆಗ್ರೊ ಇಂಡಸ್ಟ್ರಿ ಯಲ್ಲಿ ಗುರುವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಗೊತ್ತಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಹಾಗೂ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ.

ಸಿಮೆಂಟ್‌ ಲಾರಿಗೆ ಬೆಂಕಿ:

ನಗರದ ಹೊರವಲಯದ ಮನ್ಸಲಾಪುರ ರಸ್ತೆಯಲ್ಲಿ ಬುಧವಾರ ತಡ ರಾತ್ರಿ ಸಿಮೆಂಟ್ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಎರಡು ಟೈರ್ ಸುಟ್ಟಿವೆ. ಲಾರಿಯಲ್ಲಿದ್ದ ಸಿಮೆಂಟ್ ಚೀಲಗಳು ಬೆಂಕಿಗೆ ಆಹುತಿಯಾಗಿವೆ. ವಾಹನ ಚಲಿಸುತ್ತಿದ್ದಾಗ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಇದೇ ಮಾರ್ಗದಲ್ಲಿ ಸಾಗುತ್ತಿದ್ದ ವಾಹನ ಚಾಲಕರು ತಕ್ಷಣ ಲಾರಿ ಚಾಲಕನಿಗೆ ಎಚ್ಚರಿಸಿದ್ದಾರೆ. ಚಾಲಕ, ತಕ್ಷಣ ಲಾರಿಯನ್ನು ತಕ್ಷಣ ರಸ್ತೆ ಬದಿಗೆ ವಾಹನ ನಿಲ್ಲಿಸಿ ಪ್ರಾಣ ಉಳಿಸಿಕೊಂಡಿದ್ದಾರೆ.

ತೆಲಂಗಾಣ ನೋಂದಣಿ ಸಂಖ್ಯೆಯ ಲಾರಿ ಗೋವಾದಿಂದ ಕೊಲ್ಕತ್ತಾಗೆ ಹೊರಟಿತ್ತು ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT