ಮಂಗಳವಾರ, ಅಕ್ಟೋಬರ್ 19, 2021
24 °C

ಗ್ರಾಮ ವಿಕಾಸ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್: ಸಮೀಪದ ಮರಳಿ ಗ್ರಾಮದಲ್ಲಿ 2017-18 ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ₹1 ಕೋಟಿ ವೆಚ್ಚದ ಸಿ.ಸಿ ರಸ್ತೆ , ಕುಡಿಯುವ ನೀರು, ಬೀದಿ ದೀಪ ಸೇರಿ ಮೂಲ ಸೌಕರ್ಯ ಕಾಮಗಾರಿಗೆ ಲಿಂಗಸಗೂರು ಶಾಸಕ ಡಿ.ಎಸ್.ಹೂಲಗೇರಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಗ್ರಾಮದಲ್ಲಿ ಮೂಲ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಸ್ಥಳೀಯ ಪಂಚಾಯಿತಿ ಆಡಳಿತ ಮಂಡಳಿ ಸಹಕಾರ ಮುಖ್ಯವಾಗಿರುತ್ತದೆ. ನಾವೆಲ್ಲ ಸೇರಿ ಗ್ರಾಮಗಳನ್ನು ಅಭಿವೃದ್ಧಿ ಮಾಡೋಣ. ಗ್ರಾಮಸ್ಥರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾಹುದ್ ಸಾಬ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಪಾಟೀಲ ಹಾಗೂ ಬಸವರಾಜ ಜಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು