ಭಾನುವಾರ, ಸೆಪ್ಟೆಂಬರ್ 27, 2020
21 °C

ನಡುಗಡ್ಡೆಯಲ್ಲಿ ಆರು ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು (ರಾಯಚೂರು ಜಿಲ್ಲೆ): ಕೃಷ್ಣಾ ನದಿ ಪ್ರವಾಹದಲ್ಲಿ ತಾಲ್ಲೂಕಿನ ಕರಕಲಗಡ್ಡೆಯ ನಡುಗಡ್ಡೆಯಲ್ಲಿ ಗರ್ಭಿಣಿ ಸೇರಿ ಆರು ಜನ ಸಿಕ್ಕಿಹಾಕಿಕೊಂಡಿದ್ದಾರೆ. 10 ಜಾನುವಾರು, 80 ಕುರಿ–ಮೇಕೆ, ನಾಲ್ಕು ನಾಯಿಗಳೂ ಅಲ್ಲಿವೆ.

‘ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆತರಲು ತಾಲ್ಲೂಕು ಆಡಳಿತ ಮುಂದಾಗುತ್ತಿಲ್ಲ’ ಎಂದು ಸಂಬಂಧಿ ಆದಪ್ಪ ಹನುಮಪ್ಪ ಆರೋಪಿಸಿದ್ದಾರೆ.

‘ಕರಕಲಗಡ್ಡಿ ಪ್ರದೇಶದ ಜನರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರು ಸುರಕ್ಷಿತವಾಗಿದ್ದಾರೆ. ಹೆಚ್ಚುತ್ತಿರುವ ಪ್ರವಾಹ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅವರನ್ನು ಕರೆತರಲು ಸಾಧ್ಯವಾಗುತ್ತಿಲ್ಲ. ಆದರೂ, ಕರೆತರುವ ಪ್ರಯತ್ನ ಮುಂದುವರಿಸಿದ್ದೇವೆ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಹೇಳಿದರು. ನಡುಗಡ್ಡೆಗಳಾದ ಮ್ಯಾದರಗಡ್ಡಿಯಿಂದ 18 ಹಾಗೂ ವಂಕಮ್ಮನಗಡ್ಡಿಯಿಂದ ಐವರನ್ನು ಸುರಕ್ಷಿತ ಪ್ರದೇಶಕ್ಕೆ ಕರೆತರಲಾಗಿದೆ. ಎನ್‌ಡಿಆರ್‌ಎಫ್‌ ಹಾಗೂ ಸೇನಾಪಡೆಯ ತಂಡ ಜಿಲ್ಲೆಯಲ್ಲಿ ಬೀಡುಬಿಟ್ಟವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.