ಬುಧವಾರ, ಸೆಪ್ಟೆಂಬರ್ 29, 2021
20 °C

ತವದಗಡ್ಡಿ: ನಡುಗಡ್ಡೆಯಲ್ಲಿ ಸಿಲುಕಿದವರ ರಕ್ಷಣೆಗೆ ಸಾಹಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು: ತಾಲ್ಲೂಕಿನ ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶ ತವದಗಡ್ಡಿಯಲ್ಲಿ ಪಂಪ್‌ಸೆಟ್‌ ಹಾಗೂ ಜಾನುವಾರು ರಕ್ಷಣೆಗೆ ತೆರಳಿದ ಮೂವರು ಮರಳಿ ಬರಲಾಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಸಂಬಂಧಿಗಳು ಈಜುಗಾಯಿ, ಈಜುಗಾರರ ಸಹಕಾರದಿಂದ ಅವರನ್ನು ಕರೆತರಲು ಪ್ರಯತ್ನಿಸಿದರು. ಆದರೆ ಪ್ರಯತ್ನ ಸಫಲವಾಗಲಿಲ್ಲ.

ಶನಿವಾರ ಬೆಳಗಿನ ಜಾವ ತೆರಳಿದ ನಿರುಪಾದಿ, ಹುಲಗಪ್ಪ ಹಾಗೂ ದುರುಗಪ್ಪ ಅವರಿಗೆ ನಡುಗಡ್ಡೆಯಿಂದ ವಾಪಸ್ ಬರಲಾಗುತ್ತಿಲ್ಲ. ಕುಟುಂಬಸ್ಥರ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿರುವ ಅವರು ನೀರು ಹೆಚ್ಚಿನ ಪ್ರಮಾಣದಲ್ಲಿದ್ದು ಸೆಳುವಿಗೆ ಈಜಲು ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಶೀಲಹಳ್ಳಿಯಲ್ಲಿ ವಾಸ್ತವ್ಯ ಮಾಡಿರುವ ಕುಟುಂಬಸ್ಥರು ಮಕ್ಕಳು, ಮಹಿಳೆಯರು, ವಯೋವೃದ್ಧರು ನಡುಗಡ್ಡೆ ಸಂಪರ್ಕಿಸುವ ರಸ್ತೆಯ ಟಿಸಿಲೊಡೆದ ಕೃಷ್ಣಾ ನದಿ ತಟದಲ್ಲಿ ಕಾದು ಕುಳಿತಿದ್ದಾರೆ. ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದರು ಕೂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿದ್ದಾರೆ. ನಂತರದಲ್ಲಿ ಸುರಕ್ಷಿತವಾಗಿ ಕರೆತರಲು ಪ್ರಯತ್ನಿಸೋಣ ಎಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ತವದಗಡ್ಡಿಯಲ್ಲಿ ವಾಸ ಮಾಡುತ್ತಿದ್ದೆವು. ಬಹುತೇಕರು ಶುಕ್ರವಾರ ಮಧ್ಯಾಹ್ನ ಪ್ರವಾಹ ಭೀತಿಯಿಂದ ಹೊರ ಬಂದಿದ್ದೇವೆ. ಕೆಲವರು ಪಂಪಸೆಟ್‍, ಜಾನುವಾರು ಸುರಕ್ಷತೆಗಾಗಿ ಹೋಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ತಹಶೀಲ್ದಾರ್ ಅವರ ಗಮನಕ್ಕೆ ತಂದರೂ ಸ್ಪಂದನೆ ದೊರೆತಿಲ್ಲ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡ ಹನುಮಂತಪ್ಪ ಶೀಲಹಳ್ಳಿ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.