ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಬೀದಿ ವ್ಯಾಪಾರಿಗಳು ಪ್ರೋಬೇಷನರಿ ಐಎಎಸ್ ಅಧಿಕಾರಿ ಪುರುರಾಜಸಿಂಗ್ ಸೋಲಂಕಿ ಅವರಿಗೆ ಮನವಿ ಮಾಡಿದರು. ಹಳೆಯ ಬಸ್ ನಿಲ್ದಾಣದಲ್ಲಿ ವಾಹನಗಳು ನಿಲುಗಡೆ ಆಗುವುದರಿಂದ ಹೆಚ್ಚಿನ ಗ್ರಾಹಕರು ಬರುತ್ತಾರೆ. ನಮಗೆ ಅದೇ ಸ್ಥಳದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಚುರುಕು ಮುಟ್ಟಿಸಿದ ಐಎಎಸ್ ಅಧಿಕಾರಿ ಪುರಸಭೆಗೆ ಮುಖ್ಯಾಧಿಕಾರಿ ಆಗಿರುವ ಪ್ರೋಬೇಷನರಿ ಐಎಎಸ್ ಅಧಿಕಾರಿ ಪುರುರಾಜಸಿಂಗ್ ಸೋಲಂಕಿ ಅವರು ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿದ್ದಾರೆ. ಕುಡಿಯುವ ನೀರು ನಿರ್ವಹಣೆ ರಸ್ತೆ ಬದಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆಗ ಮೂಲಕ ಸಂಚರಿಸಿ ಸ್ಥಿತಿಗತಿ ಅರಿಯುವ ಕೆಲಸ ಮಾಡುತ್ತಿದ್ದಾರೆ.