ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧನೆಗಾಗಿ ಮೊಬೈಲ್‌ಬಿಟ್ಟು, ಪುಸ್ತಕ ಹಿಡಿಯಿರಿ

ಡಿ.ದೇವರಾಜ ಅರಸು 104ನೇ ಜನ್ಮದಿನ ಕಾರ್ಯಕ್ರಮ: ಜಿ.ಪಂ.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿಕೆ
Last Updated 20 ಆಗಸ್ಟ್ 2019, 12:59 IST
ಅಕ್ಷರ ಗಾತ್ರ

ರಾಯಚೂರು: ವಿದ್ಯಾರ್ಥಿಗಳು ಜೀವನದ ಗುರಿ ಸಾಧಿಸಲು ಮೊಬೈಲ್‌ ಬಿಟ್ಟು ಪುಸ್ತಕಗಳನ್ನು ಕೈಯಲ್ಲಿ ಹಿಡಿದುಕೊಳ್ಳುವ ಅಭ್ಯಾಸ ಮಾಡಬೇಕು. ಪೋಷಕರಿಗೆ ಹಾಗೂ ಶಿಕ್ಷಕರಿಗೆ ಹೆಸರು ಬರುವಂತೆ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸುರ 104ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಕುಂಠಿತವಾಗಬಾರದು ಎಂಬ ಕಾರಣಕ್ಕೆ ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಸತಿ ನಿಲಯಗಳನ್ನು ಸ್ಥಾಪಿಸಿದರು. ರೈತರು, ಕಾರ್ಮಿಕರ, ಬಡವರ ಹಿತಕ್ಕಾಗಿ ಹಲವಾರು ಯೋಜನೆ ಜಾರಿಗೆ ತರುವ ಮೂಲಕ ಜನನಾಯಕರಾಗಿ ಬೆಳೆದಿದ್ದಾರೆ. ಅವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ದಸ್ತಗಿರಸಾಬ್‌ ದಿನ್ನಿ ಉಪನ್ಯಾಸ ನೀಡಿ, ನಾಡು ಕಂಡ ಶ್ರೇಷ್ಠ ರಾಜಕಾರಣಿಯಾಗಿರುವ ಅರಸುರವರು ಕ್ರಿಯಾಶೀಲ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದ್ದಾರೆ. ಜನಪರ ಚಿಂತನೆಗಳನ್ನು ಮೈಗೂಡಿಸಿಕೊಂಡು ಜನರ ಧ್ವನಿಯಾಗಿದ್ದರು ಎಂದು ಹೇಳಿದರು.

ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಸಾಗಲು ಹಿರಿಯರ ಮಾರ್ಗದರ್ಶನದ ಮಾತುಗಳನ್ನು ಪ್ರೀತಿಯಿಂದ ಸ್ವೀಕರಿಸುವ ಮನೋಭಾವ ಹೊಂದಿದ್ದ ಅರಸುರವರು, ದೀನದಲಿತ, ಹಿಂದುಳಿದ ವರ್ಗದವರು ನೆಮ್ಮದಿಯ ಜೀವನ ಸಾಗಿಸಲು ಯಾರೇ ಅಳಲು ತೋಡಿಕೊಂಡರೂ ತಕ್ಷಣ ಸ್ಪಂದಿಸುವ ಮಹಾನ್ ವ್ಯಕ್ತಿಯಾಗಿದ್ದರು ಎಂದರು.

ಉಪವಿಭಾಗಾಧಿಕಾರಿ ಸಂತೋಷ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರೂ ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅರಸುರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಂ.ಎಸ್.ಗೋನಾಳ, ಗಂಗಾಮತಸ್ಥ ಸಮಾಜದ ರಾಜ್ಯ ಉಪಾಧ್ಯಕ್ಷ ಕೆ.ಶಾಂತಪ್ಪ, ಭಗತರಾಜ ನಿಜಾಂಕಾರಿ, ಜಿ.ಸುರೇಶ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT