ಲಿಂಗಸುಗೂರು: ‘ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ರೈತರ ಬಹುವರ್ಷಗಳ ನಿರೀಕ್ಷೆಯ ಕೆರೆ ತುಂಬಿಸುವ ಕಾರ್ಯ ನನೆಗುದಿಗೆ ಬಿದ್ದಿದೆ. ಈ ನಿಟ್ಟಿನಲ್ಲಿ ನಮ್ಮವರೆ ಆದ ಸಚಿವ ಎನ್.ಎಸ್. ಬೋಸರಾಜು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಪತ್ರ ಬರೆದಿದ್ದಾರೆ.

ಶನಿವಾರ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕೃಷ್ಣಾ ಮತ್ತು ತುಂಗಭದ್ರಾ ನದಿಗಳು ಹರಿಯುವ ದೋಅಬ್ ಪ್ರದೇಶವೆಂದು ಗುರುತಿಸಿಕೊಂಡ ಜಿಲ್ಲೆಗಳಲ್ಲಿ ಭಾಗಶಃ ನೀರಾವರಿ ಸೌಲಭ್ಯ ಬಂದಿದೆ. ನೀರಾವರಿ ವಂಚಿತ ಪ್ರದೇಶಗಳಲ್ಲಿ ಅಂತರ್ಜಲ ಸಮಸ್ಯೆಯಿಂದ ರೈತರು ಪರದಾಡುವಂತಾಗಿದೆ’ ಎಂದರು.

‘ಜಿಲ್ಲೆಗಳಲ್ಲಿನ ನೀರಾವರಿ ಯೋಜನೆಗಳ ಕಾಲುವೆಗಳು ಹಾಗೂ ನದಿಗಳಿಂದ ಕೆರೆ ತುಂಬಿಸುವ ಕಾರ್ಯ ಕೈಗೆತ್ತಿಕೊಳ್ಳಬೇಕು. ಕೆರೆಗಳಿಗೆ ನೀರು ತುಂಬಿಸುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜೊತೆಗೆ ಅಂತರ್ಜಲಮಟ್ಟ ಹೆಚ್ಚಾಗಿ ರೈತರಿಗೆ ಅನುಕೂಲ ಆಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.