ಭಾನುವಾರ, ಏಪ್ರಿಲ್ 18, 2021
24 °C

ಅನುದಾನ ದುರ್ಬಳಕೆ: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು:  ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿಗೆ 2020-21ನೇ ಸಾಲಿಗೆ ಬಿಡುಗಡೆಯಾಗಿದ್ದ ₹ 52.50ಲಕ್ಷ ಅನುದಾನ ದುರ್ಬಳಕೆ ಮಾಡಿಕೊಂಡಿರುವುದನ್ನು ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ನೇಹಿತರ ಬಳಗ ಆಗ್ರಹಪಡಿಸಿದೆ.

ಬುಧವಾರ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ಯುವಕರು, ಸರ್ಕಾರದ ಯಾವುದೇ ಅನುದಾನ ಬಳಕೆ ಮಾಡುವ ಮುಂಚೆ ಕ್ರಿಯಾಯೋಜನೆ ಸಿದ್ದಪಡಿಸಿಕೊಂಡು, ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ನಕಲಿ ಬಿಲ್‍ ಸೃಷ್ಟಿಸಿ
ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಕಾರಣ ಹಿರಿಯ ಅಧಿಖಾರಿಗಳಿಂದ 15ನೇ ಹಣಕಾಸು ಯೋಜನೆ ಹಣ ದುರ್ಬಳಕೆ ಕುರಿತು ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಗುರುತಿಸಿ ಕ್ರಿಮಿನಲ್‍ ಮೊಕದ್ದಮೆ ದಾಖಲಿಸುವ ಜೊತೆಗೆ ಇಲಾಖೆ ವಿಚಾರಣೆ ನಡೆಸಬೇಕು. ಇಲ್ಲದೆ ಹೋದಲ್ಲಿ ಸ್ನೇಹಿತರ ಬಳಗ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಬಸವರಾಜ ತಿಮ್ಮಣ್ಣ, ಹನುಮಗೌಡ, ಮುತ್ತು, ಜೀವಪ್ಪಗೌಡ, ವೆಂಕಟೇಶ, ಸಾಬಣ್ಣ, ಅಮರೇಶ ಹಾಗೂ ಸ್ನೇಹಿತರ
ಬಳಗದ ಪ್ರಮುಖರು ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.