ಶುಕ್ರವಾರ, ಜುಲೈ 30, 2021
28 °C

ಮತ್ತೆ ನಾಲ್ಕು ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಮತ್ತೆ ನಾಲ್ಕು ಮಂದಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 414ಕ್ಕೆ ಏರಿಕೆಯಾಗಿದೆ. ಓಪೆಕ್‌ ಆಸ್ಪತ್ರೆಯಲ್ಲಿ ಒಟ್ಟು 275 ಜನರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಇದುವರೆಗೂ ಸೋಂಕಿನಿಂದ ಗುಣಮುಖರಾದ 137 (ಶೇ 33) ಜನರನ್ನು ಬಿಡುಗಡೆ ಮಾಡಲಾಗಿದೆ.

ಹೊಸದಾಗಿ ಕೋವಿಡ್‌ ದೃಢವಾದವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ. ದೇವದುರ್ಗ ತಾಲ್ಲೂಕಿನ ನಿಲವಂಜಿ ಗ್ರಾಮದ 17 ವರ್ಷ ಬಾಲಕಿ, ಹಿರೇಬೂದೂರು ಗ್ರಾಮದ 17 ವರ್ಷ ಬಾಲಕ, ರಾಯಚೂರು ನಗರದ 65 ವರ್ಷ ಪುರುಷ ಹಾಗೂ 45 ವರ್ಷದ ಮಹಿಳೆ ಇದ್ದಾರೆ. ಇದುವರೆಗೂ ರಾಯಚೂರು ತಾಲ್ಲೂಕಿನಲ್ಲಿ 67, ದೇವದುರ್ಗ ತಾಲ್ಲೂಕಿನಲ್ಲಿ 314, ಲಿಂಗಸುಗೂರು ತಾಲ್ಲೂಕಿನಲ್ಲಿ 22 ಹಾಗೂ ಮಾನ್ವಿ ತಾಲ್ಲೂಕಿನಲ್ಲಿ 11 ಸೋಂಕಿತರು ಪತ್ತೆಯಾದಂತಾಗಿದೆ.

ಮಾದರಿಗಳ ರವಾನೆ: ಕೋವಿಡ್‌ ಪರೀಕ್ಷೆಗಾಗಿ ಜಿಲ್ಲೆಯಾದ್ಯಂತ ಗುರುವಾರ 305 ಜನರ ಗಂಟಲು ದ್ರುವವನ್ನು ಸಂಗ್ರಹಿಸಿ ಕಳುಹಿಸಲಾಗಿದ್ದು, ಒಟ್ಟು 690 ಮಾದರಿಗಳ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.

ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ 180 ಜನರಿದ್ದಾರೆ. ದೇವದುರ್ಗ ತಾಲ್ಲೂಕಿನ ಎಲ್ಲ ಕ್ವಾರಂಟೈನ್‌ ಕೇಂದ್ರಗಳಿಂದ ಎಲ್ಲರನ್ನು ಬಿಡುಗಡೆ ಮಾಡಲಾಗಿದೆ. ರಾಯಚೂರಿನಲ್ಲಿ 74, ಸಿಂಧನೂರಿನಲ್ಲಿ 30, ಮಾನ್ವಿಯಲ್ಲಿ 34 ಹಾಗೂ ಲಿಂಗಸುಗೂರಿನಲ್ಲಿ 42 ಜನರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.