ಸೋಮವಾರ, ಜೂನ್ 21, 2021
30 °C

ಶಕ್ತಿನಗರ: ಪತ್ತೆಯಾಗದ ನಾಲ್ಕು ಮಂದಿ, ಮುಂದುವರಿದ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಕ್ತಿನಗರ: ಪೆದ್ದಕುರಂ ಸಮೀಪದ ಕೃಷ್ಣಾ ನದಿಯಲ್ಲಿ ಸೋಮವಾರ ಸಂಜೆ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮಂಗಳವಾರ ಬೆಳಿಗ್ಗೆಯೂ ಮುಂದುವರೆದಿದೆ.

ಎನ್‌ಡಿಆರ್‌ಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಕೃಷ್ಣಾ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ನಾಲ್ವರು ತೆಲಂಗಾಣ ಗಡಿ ಪ್ರದೇಶದಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಮುಖ್ತಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚಪಾಡುವಿನಲ್ಲಿ ಸಂತೆ ಮುಗಿಸಿಕೊಂಡು 13 ಮಂದಿ ತೆಪ್ಪದಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.

'ತೆಪ್ಪದಲ್ಲಿದ್ದ 9 ಜನರನ್ನು ರಕ್ಷಿಸಲಾಗಿದೆ. ಕಾಣೆಯಾಗಿರುವ ಬಾಲಕಿ ಮತ್ತು ಮೂವರು ಮಹಿಳೆಯರಿಗಾಗಿ ಶೋಧ ತೀವ್ರಗೊಳಿಸಲಾಗಿದೆ' ಎಂದು ತಹಶಿಲ್ದಾರ್ ಹಂಪಣ್ಣ ಸಜ್ಜನ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು