ಸೋಮವಾರ, ಆಗಸ್ಟ್ 10, 2020
21 °C

ನಾಲ್ವರ ಹತ್ಯೆ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು (ರಾಯಚೂರು ಜಿಲ್ಲೆ): ಮೌನೇಶ ಮತ್ತು ಮಂಜುಳಾ ಎಂಬುವರ ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಶನಿವಾರ ನಡೆದ ನಾಲ್ವರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಕುಟುಂಬದ ಮುಖ್ಯಸ್ಥ, ಮೌನೇಶನ ತಂದೆ ಈರಪ್ಪ (58) ಅವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಪ್ರಕರಣದ ಆರೋಪಿಗಳಾದ ಫಕೀರಪ್ಪ, ರೇಣುಕಾ, ಸೋಮಶೇಖರ, ಗಂಗಮ್ಮ ಮತ್ತು ಅಂಬಣ್ಣ ಎಂಬುವರು ತಲೆಮರೆಸಿಕೊಂಡಿದ್ದರು. ಕಾರ್ಯಾಚರಣೆ ನಡೆಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಐಜಿಪಿ ಎಂ.ನಂಜುಂಡಸ್ವಾಮಿ, ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು