ಭಾನುವಾರ, ಸೆಪ್ಟೆಂಬರ್ 26, 2021
21 °C

16 ರಿಂದ ಉಚಿತ ಯೋಗ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜೂನ್‌ 16 ರಿಂದ 21 ರವರೆಗೂ ಪತಂಜಲಿ ಯೋಗ ಸಮಿತಿಯಿಂದ ಉಚಿತವಾಗಿ ಯೋಗ, ಪ್ರಾಣಾಯಮ ಶಿಬಿರ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ವಿಠೋಬರಾವ್‌ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್‌ವಿಡಿ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 5.30 ರಿಂದ 7 ರವರೆಗೂ ಶಿಬಿರ ನಡೆಯುವುದು. ನ್ಯಾಯಾಧೀಶ ಬೈಲೂರು ಶಂಕರರಾಮ ಅವರು ಶಿಬಿರ ಉದ್ಘಾಟನೆ ಮಾಡುವರು. ಯೋಗದಿಂದ ಆರೋಗ್ಯ ಸುಧಾರಣೆಗೆ ಆಗುವ ಅನುಕೂಲಗಳ ಬಗ್ಗೆ ಜನರಿಗೆ ಅರಿವಿದೆ. ಮನಸ್ಸಿನ ಶುದ್ಧಿ, ಧನಾತ್ಮಕ ವಿಚಾರಗಳನ್ನು ಬೆಳೆಸಿಕೊಳ್ಳಲು ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದರು.

ರಾಜಶೇಖರ, ಗೋವಿಂದ, ಅಂಜನಾ, ಬ್ರಹ್ಮಗಣೇಶ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು