ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸೂಗೂರು: ಇಲ್ಲಿ ಮನೆ ಬಾಗಿಲಿಗೆ ಬರುತ್ತೆ ತಾಜಾ ತರಕಾರಿ

Last Updated 1 ಏಪ್ರಿಲ್ 2020, 19:30 IST
ಅಕ್ಷರ ಗಾತ್ರ

ಶಕ್ತಿನಗರ: ಇಲ್ಲಿನ ದೇವಸುಗೂರು ಗ್ರಾಮದಲ್ಲಿ ತೋಟಗಾರಿಕೆಯ ಇಲಾಖೆಯು ಮಿನಿ ವಾಹನದ ಮೂಲಕ ಗ್ರಾಹಕರ ಮನೆಯ ಬಾಗಿಲಿಗೆ ಹೋಗಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಆರಂಭಿಸಿದೆ.

‘ಪರಿಸರ ಪ್ರೇಮಿ’ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಸಹಯೋಗದಲ್ಲಿ ದೇವಸೂಗೂರಿನ 58 ವಾರ್ಡ್‌ನಲ್ಲಿ ಹಣ್ಣು ಮತ್ತು ತರಕಾರಿಗಳನ್ನು ತಲುಪಿಸಲಾಗುತ್ತಿದೆ. ರೈತರು ತಮ್ಮ ತೋಟಗಾರಿಕೆ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶವನ್ನು ತೋಟಗಾರಿಕೆ ಇಲಾಖೆಯು ಈ ಮೂಲಕ ಕಲ್ಪಿಸಿದೆ.

ಆಸಕ್ತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡುವ ಅವಕಾಶದ ಸದ್ಭಳಕೆಯನ್ನು ಮಾಡಿಕೊಳ್ಳಬಹುದಾಗಿದೆ.

‘ಮುಂದಿನ ದಿನಗಳಲ್ಲಿ ಮಾವು ಕೂಡ ಕಟಾವಿಗೆ ಬರಲಿದ್ದು , ಮಾವು ಬೆಳೆಗಾರರು ಆತಂಕ ಪಡದೇ ತಮ್ಮ ಹಣ್ಣನ್ನು ಕಟಾವು ಮಾಡಿ, ರಾಸಾಯನಿಕ ಬಳಸದೆ ನೈಸರ್ಗಿಕ ರೀತಿಯಲ್ಲಿ ಮಾಗಿಸಿ ತಮ್ಮ ಹಣ್ಣುಗಳನ್ನು ಇಲಾಖೆಗೆ ತಂದು ಮಾರಾಟ ಮಾಡುವ ಅವಕಾಶವಿರುತ್ತದೆ. ಆದ್ದರಿಂದ ರೈತರು ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಮಾವಿನ ಹಣ್ಣನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ರೈತರು ತಮ್ಮ ಉತ್ಪನ್ನವನ್ನು ಸರಿಯಾದ ಸಮಯದಲ್ಲಿ ಕಟಾವು ಮಾಡಿ ಪ್ಲಾಸ್ಟಿಕ್‌ ಕ್ರೇಟ್‌ಗಳಲ್ಲಿ ಸಂಗ್ರಹಿಸಿ ಇಲಾಖೆಗೆ ತಂದು ಮಾರಾಟ ಮಾಡುವುದಕ್ಕೆ ಅವಕಾಶ ಇರುತ್ತದೆ. ಮಧ್ಯವರ್ತಿಗಳ ಪಾಲಾಗುವ ಲಾಭವನ್ನು ರೈತರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ತಾಜಾ ತರಕಾರಿಗಳನ್ನು ಖರೀದಿಸಲು ಜನರು ಆಸಕ್ತಿಯಿಂದ ಮುಂದೆ ಬರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪ ನಿರ್ದೇಶಕ 9448910277 ಮತ್ತು ಪರಿಸರ ಪ್ರೇಮಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಲಿಮಿಟೆಡ್‌ ಅಧ್ಯಕ್ಷ ಸರ್ವೇಶ್‌ ರಾಯುಡು 9060422111 ಅವರನ್ನು ಸಂಪರ್ಕಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT