ಜಾಲಹಳ್ಳಿ:ಸಮೀಪದ ಗಲಗ ಗ್ರಾಮದಲ್ಲಿ ಸುಟ್ಟು ಹೋಗಿದ್ದ ವಿದ್ಯುತ್ ಪರಿವರ್ತಕ ವನ್ನು ಜೆಸ್ಕಾಂ ಅಧಿಕಾರಿಗಳು ಮಂಗಳವಾರ ದುರಸ್ತಿಗೊಳಿಸಿ ಪುನಃ ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ.

ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲದೇ ಜನತೆ ತುಂಬಾ ತೊಂದರೆ ಅನುಭವಿಸಿದ್ದರು. ಈ ಕುರಿತು ‘ಗಲಗ:ನೀರಿನ ಸಮಸ್ಯೆ ಉಲ್ಬಣ’ ಶೀರ್ಷಿಕೆಯಡಿ ಮೇ 31ರಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಸಮಸ್ಯೆ ಅರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದರು. ಅಲ್ಲದೆ ಜೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ಪಿಡಿಒ ಚನ್ನಬಸವ. ಬಿ. ಗಣೇಕಲ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-2064207269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.