ಜಾಲಹಳ್ಳಿ: ಇಲ್ಲಿಗೆ ಸಮೀಪದ ಗಲಗ ಗ್ರಾಮದಲ್ಲಿ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ.

ಕೃಷಿ ಚಟುವಟಿಕೆಗಳು ಪ್ರಾರಂಭಗೊಂಡಿರುವುದರಿಂದ ಜಮೀನುಗಳಲ್ಲಿಯೇ ತುಂಬಾ ಕೆಲಸ ಇದ್ದು, ಅದನ್ನು ಬಿಟ್ಟು ಕುಡಿಯುವ ನೀರಿಗಾಗಿ ಮನೆಯಲ್ಲಿ ಕಾಯುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮದ ನಿವಾಸಿ ಮಲ್ಲಮ್ಮ ಆರೋಪಿಸಿದರು.

ಗ್ರಾಮದ ವಾಲ್ಮೀಕಿ ವೃತ್ತದ ಬಳಿಯ ವಿದ್ಯುತ್ ಪರಿವರ್ತಕ ಸುಟ್ಟಿದ್ದು, ದುರಸ್ತಿಗೊಳಿಸದೇ ಇರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ. ಕೆಲವು ವಾರ್ಡ್ಗಳಲ್ಲಿ ಕತ್ತಲೆ ಆವರಿಸಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ ಬೆಳಿಗ್ಗೆ ಹಾಗೂ ಸಂಜೆ ನೀರು ಸರಬರಾಜು ಮಾಡುತ್ತಿದ್ದಾರೆ. ಬಳಕೆ ನೀರಿಗೆ ಜನತೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ಪರಿವರ್ತಕ ಬದಲಾಯಿ ಸುವಂತೆ ಜೆಸ್ಕಾಂ ಅಧಿಕಾ ರಿಗಳಿಗೆ ಮನವಿ ಮಾಡಲಾಗಿದೆ. ದುರಸ್ತಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಪಿಡಿಒ ಚನ್ನಬಸವ ಬಿ.ಗಣೇಕಲ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-534980481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.