ಪ್ರಜಾವಾಣಿ ವಾರ್ತೆ

ಮಾನ್ವಿ: ಪಟ್ಟಣದಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ವೇಳೆ ಭಾನುವಾರ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ರಹಮತ್ ಅಲಿ ಮತ್ತು ಸಹೋದರರು ಗಣೇಶ ಭಕ್ತರು ಹಾಗೂ ಯುವಕ ಮಂಡಳಿಗಳ ಸದಸ್ಯರಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಸೌಹಾರ್ದ ಮೆರೆದರು.

ಪಟ್ಟಣದ ಹಳೆಯ ಸರ್ಕಾರಿ ಆಸ್ಪತ್ರೆ ಹತ್ತಿರ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಯುವಕರು, ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಹೋದರತ್ವ ಸಂದೇಶ ಸಾರಿದರು.

ಮುಖಂಡ ಎ.ಬಿ. ಉಪ್ಪಳಮಠ ವಕೀಲ, ಸೈಯದ್ ಸಜ್ಜಾದ್ ಹುಸೇನ್ ಮತವಾಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮತ್ತು ಪಟ್ಟಣದ ಗಣ್ಯರು ಪ್ರತಿ ವರ್ಷ ಗಣೇಶೋತ್ಸವದಲ್ಲಿ ಅನ್ನ ಸಂತರ್ಪಣೆ ಕೈಗೊಳ್ಳುವ ಮುಸ್ಲಿಂ ಸಹೋದರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಪ್ರತಿಷ್ಠಾಪಿಸಿದ್ದ 30ಕ್ಕೂ ಅಧಿಕ ಗಣೇಶ ಮೂರ್ತಿಗಳ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಶಾಂತಿಯುತವಾಗಿ ವಿಜೃಂಭಣೆಯಿಂದ ನಡೆಯಿತು. ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಹಿರೇಬಾವಿಯಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಸೋಮವಾರ ಬೆಳಗಿನ ಜಾವದವರೆಗೂ ನಡೆಯಿತು. ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.