ಸೋಮವಾರ, ಆಗಸ್ಟ್ 8, 2022
23 °C

ಸಿಂಧನೂರಿನಲ್ಲಿ ಗಾಂಜಾ ವಶ, ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ತಾಲ್ಲೂಕಿನ ಆರ್.ಎಚ್.ಕ್ಯಾಂಪ್‌ ನಂ.2 ರಲ್ಲಿ ಜಮೀನೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಕೊಂಡಿದ್ದಾರೆ.  ಈ ಸಂಬಂಧ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಹನುಮೇಶ ಸರ್ಕಾರ (38) ಬಂಧಿತ ಆರೋಪಿ.

ಈತನು ತನ್ನ ಜಮೀನಿನಲ್ಲಿ ಬೆಳೆದಿದ್ದ ಸುಮಾರು ₹1,000 ಮೌಲ್ಯದ 1 ಕೆ.ಜಿ 140 ಗ್ರಾಂ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಜಿ.ಎಸ್.ರಾಘವೇಂದ್ರ ನೇತೃತ್ವದ ಸಿಬ್ಬಂದಿ ಚನ್ನಬಸವ, ದ್ಯಾಮಣ್ಣ, ಪರಶುರಾಮ, ಅಮರೇಶ ಹಾಗೂ ಶರಣಪ್ಪ ಅವರನ್ನು ಒಳಗೊಂಡ ತಂಡ ದಾಳಿ ನಡೆಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.