ಸೋಮವಾರ, ಅಕ್ಟೋಬರ್ 14, 2019
24 °C

ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶ

Published:
Updated:
Prajavani

ರಾಯಚೂರು: ವಿವಿಧ ಕಾರಣಗಳಿಂದ ಯುವಕರು ಮಾನಸಿಕ ಅಸ್ವಸ್ಥತೆಗೆ ಒಳಗಾಗುತ್ತಿದ್ದು, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಬೇಕು ಎಂದು ನ್ಯಾಯಾಧೀಶ ಎಂ.ಸಿ.ನಾಡಗೌಡ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಇಲಾಖೆಯ ಡಾ.ಎಂ.ಎನ್.ನಂದಿತಾ ಹಾಗೂ ಮನೋವೈದ್ಯ ಡಾ.ಮನೋಹರ್ ಪತ್ತಾರ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ದಸ್ತಗೀರ್ ಸಾಬ್ ದಿನ್ನಿ ಅಧ್ಯಕ್ಷತೆ ವಹಿಸಿದ್ದರು.

ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕವಿತಾ, ನೇಹಾ ಹಾಗೂ ಪರಶುರಾಮ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದುಕೊಂಡರು.

ಉಪನ್ಯಾಸಕಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಮಲ್ಲನಗೌಡ ವಂದಿಸಿದರು.

Post Comments (+)