ಮಾನ್ವಿ: ‘ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.
ಗುರುವಾರ ತಾಲ್ಲೂಕಿನ ಪೋತ್ನಾಳ ಗ್ರಾಮದ ಸಮೀಪದ ಜಮೀನುಗಳಲ್ಲಿ ಬಿಜೆಪಿ ಪರವಾಗಿ ಬರ ಅಧ್ಯಯನ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಬರ ಹಾಗೂ ನೀರಿನ ಕೊರತೆಯಿಂದ ಭತ್ತ, ಜೋಳ, ತೊಗರಿ ಮತ್ತಿತರ ಬೆಳೆಗಳು ಒಣಗಿವೆ. ರೈತರು ಸಂಪೂರ್ಣ ಬೆಳೆ ನಷ್ಟದಲ್ಲಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಜಿಲ್ಲೆಯ ಸಚಿವರು ಭೇಟಿ ನೀಡದೆ ನಿರ್ಲಕ್ಷ್ಯ ಮಾಡಿರುವುದು ಸರಿಯಲ್ಲ. ಬರ ನಿರ್ವಹಣೆಗೆ ಜಿಲ್ಲೆಗೆ ಕೇವಲ ₹9 ಕೋಟಿ ಬಿಡುಗಡೆ ಮಾಡಿರುವುದು ಸಾಕಾಗುವುದಿಲ್ಲ. ಇನ್ನು ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ರೈತರ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಶಾಸಕ ಬೆಲ್ಲದ ಒತ್ತಾಯಿಸಿದರು.
ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ, ಮುಖಂಡರಾದ ಕೊಟ್ರೇಶಪ್ಪ ಕೋರಿ, ಕೆ.ಎಸ್.ಕುಮಾರಸ್ವಾಮಿ ಪೋತ್ನಾಳ, ಉಮೇಶ ಸಜ್ಜನ್, ಮ್ಯಾಕಲ್ ಅಯ್ಯಪ್ಪ ನಾಯಕ, ಶಿವನಗೌಡ ಬ್ಯಾಗವಾಟ್, ಶ್ರೀಕಾಂತ ಪಾಟೀಲ ಗೂಳಿ, ಅಮರೇಶ ಕಟ್ಟಿಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.