ರಾಯಚೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ಬಿಎಂಎಸ್ ಸಂಯೋಜಿತ) ಜಿಲ್ಲಾ ಘಟಕದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸಿಬ್ಬಂದಿ ನಿರ್ವಹಣೆ ಮಾಡುವ ಕಾರ್ಯವನ್ನು ಗುತ್ತಿ, ಹೊರಗುತ್ತಿಗೆ ನೌಕರರು ಮಾಡುತ್ತಿದ್ದಾರೆ. ಆದರೆ, ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಒಟ್ಟು 1,400 ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್‍ಟಿಎಸ್ ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಾಲ್ಲೂಕು ಲೆಕ್ಕಪತ್ರ ಸಹಾಯಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಇದುವರೆಗೂ ಯಾವುದೇ ಪರಿಹಾರವನ್ನು ಕಲ್ಪಿಸಿಲ್ಲ ಎಂದು ದೂರಿದರು.
ಮೂರು ವರ್ಷಗಳಿಂದಲೂ ನಿರಂತರವಾಗಿ ಹೋರಾಟವನ್ನು ನಡೆಸುತ್ತಾ ಬರಲಾಗಿದೆ. ಸೆಪ್ಟೆಂಬರ್ 24ರಿಂದ ಕೆಲಸ ಬಹಿಷ್ಕರಿಸಿ ಶಾಂತಿಯುತವಾಗಿ ಮನೆಯಲ್ಲಿದ್ದುಕೊಂಡು ಅನಿರ್ದಿಷ್ಟವಧಿ ಮುಷ್ಕರವನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಯನ್ನೊಳಗೊಂಡಂತೆ 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಉಪಾಧ್ಯಕ್ಷ ಸಂಧ್ಯಾ, ಜಿಲ್ಲಾ ಅಧ್ಯಕ್ಷ ನಾಗರಾಜ ವರ್ಮಾ, ಗೌರವ ಸಲಹೆಗಾರರ ಗುರುಪ್ರಸಾದ ಹಿರೇಮಠ, ಕಾರ್ಯದರ್ಶಿ ಮಹೇಶ ಮಡಿವಾಳ, ಪದಾಧಿಕಾರಿಗಳಾದ ಕೃಷ್ಣವೇಣಿ, ರವಿಶಂಕರ ಶುಕ್ಲಾ, ಸಿದ್ಧರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.