ಮಂಗಳವಾರ, ಜೂನ್ 2, 2020
27 °C
ಕೊರೊನಾ ತಡೆಗೆ ಟಾಸ್ಕ್‌ಫೋರ್ಸ್ ಸಮಿತಿ ಸಭೆ

ಜಾಲಹಳ್ಳಿ: ಬಡವರಿಗೆ ಅಗತ್ಯ ವಸ್ತು ತಲುಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಾಲಹಳ್ಳಿ: ಪಟ್ಟಣದಲ್ಲಿರುವ ಬಡವರು, ನಿರ್ಗತಿಕರನ್ನು ಪಟ್ಟಿ ಮಾಡಿ ಅವರಿಗೆ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ನಾಯಕ ಗಲಗ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಿಂದ ನಾಲ್ಕು ಕುಟುಂಬಗಳಿಗೆ ಅಹಾರ ಧಾನ್ಯ ವಿತರಣೆ ಮಾಡಲಾಗಿದೆ ಎಂದು ಕಂದಾಯ ನಿರೀಕ್ಷಕ ದೇವರೆಡ್ಡಿ ಸಭೆಯಲ್ಲಿ ತಿಳಿಸಿದರು.

ಇನ್ನೂ ಕೆಲವು ಕುಟುಂಬಗಳಿಗೆ ಆಹಾರಧಾನ್ಯ ವಿತರಿಸಬೇಕಿದೆ. ಅವರ ಪಟ್ಟಿ ಸಿದ್ಧಪಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಟ್ಟಣದಲ್ಲಿ 364 ಜನ ಗುಳೆ ಹೋಗಿ ವಾಪಸ್ ಬಂದಿದ್ದಾರೆ. ಅವರನ್ನು ಹೋಮ್ ಕ್ವಾರಂಟೈನ್‌ನಲ್ಲಿ ಇರಿಸಬೇಕು. ಅವರ ಮನೆಯ ಬಾಗಿಲಿಗೆ ಕೊರೊನಾ ಜಾಗೃತಿ ಭಿತ್ತಿಪತ್ರ ಅಂಟಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು. ಅಲ್ಲದೆ, ಅವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಕಾನ್‌ಸ್ಟೆಬಲ್‌ ಮುರಿಗೆಪ್ಪ ಸಭೆ ತಿಳಿಸಿದರು.

ಗ್ರಾಮದ ಬಹುತೇಕ ವಾರ್ಡ್‌ಗಳ ಚರಂಡಿಗಳಲ್ಲಿ ಹೂಳು ತುಂಬಿದೆ. ಅದನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ವಿಲೇವಾರಿ ಮಾಡಲು   ಗ್ರಾಮ ಪಂಚಾಯಿತಿಯಲ್ಲಿ ಟ್ರ್ಯಾಕ್ಟರ್‌ ಇಂಜಿನ್‌ ಇದೆ. ಟ್ರ್ಯಾಲಿ ವ್ಯವಸ್ಥೆ ಮಾಡಿಕೊಳ್ಳಬೇಕಾಗಿತ್ತು. ಅದರೆ, ಇಲ್ಲಿಯವರೆಗೆ ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ತಾಲ್ಲೂಕು ಪಂಚಾಯಿತಿಯಿಂದ ಟ್ರ್ಯಾಲಿ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ತಾಕೀತು ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಯ್ಯ ಮುರಾಳ, ಕಾರ್ಯದರ್ಶಿ ನಿಂಗಯ್ಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು