ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆದ್ಯತೆ ನೀಡಿ: ಲಕ್ಷ್ಮಿದೇವಿ

Last Updated 11 ಮಾರ್ಚ್ 2022, 11:07 IST
ಅಕ್ಷರ ಗಾತ್ರ

ಸಿಂಧನೂರು: ಬದಲಾಗುತ್ತಿರುವ ಸಮಾಜದಲ್ಲಿ ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಅವಶ್ಯಕತೆಯಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿದೇವಿ ಸಲಹೆ ನೀಡಿದರು.

ನಗರದ ಸರ್ಕಾರಿ ಮಹಾವಿದ್ಯಾಲಯ ಎದುರುಗಡೆ ಇರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಅಭ್ಯಾಸ ಮಾಡಿ ಮೊದಲು ಶಿಕ್ಷಕಿಯಾಗಿ ನಂತರ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಕೆಎಎಸ್ ಅಧಿಕಾರಿಯಾಗಿರುವ ತಮ್ಮ ಜೀವನದ ಪ್ರಸಂಗಗಳನ್ನು ವಿವರಿಸಿದರು.

ವಿಶೇಷ ಉಪನ್ಯಾಸ ನೀಡಿದ ವಿರುಪಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರಮಾದೇವಿ ಶಂಭೋಜಿ ಅವರು, ಸಾಧಕ ಮಹಿಳೆಯರ ಜೀವನ ಚರಿತ್ರೆಯನ್ನು ಪ್ರಸ್ತಾಪಿಸಿದರು.

ನ್ಯಾಷನಲ್ ಕಾಲೇಜು ಉಪನ್ಯಾಸಕಿ ಹೇಮಾಲಕ್ಷ್ಮಿ, ವಿದ್ಯಾರ್ಥಿನಿ ದುರ್ಗಮ್ಮ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹಾಲಿಂಗಪ್ಪ ಇಂಗಳದಾಳ, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬೀರಪ್ಪ ಶಂಭೋಜಿ, ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ, ನೀರಮಾನ್ವಿಯ ಸಹಶಿಕ್ಷಕರಾದ ದೇವರಾಜ, ಮಹ್ಮದ್ ಇದ್ದರು. ಸುನೀತಾ ಸಂಗಡಿದರು ಪ್ರಾರ್ಥಿಸಿದರು. ಸುಧಾ ಸ್ವಾಗತಿಸಿದರು. ರಾಜೇಶ್ವರಿ ನಿರೂಪಿಸಿದರು. ಕವಿತಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT