ಗುರುವಾರ , ಜೂನ್ 17, 2021
22 °C
ಸರ್ಕಾರಿ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗೆ ಡಿಸಿ ಭೇಟಿ, ಪರಿಶೀಲನೆ

‘ಮೂಲಸೌಕರ್ಯಕ್ಕೆ ಆದ್ಯತೆ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆ ಅಗತ್ಯವಿರುವ ಮೂಲಸೌಕರ್ಯಗಳಿಗೆ ವೈದ್ಯಾಧಿಕಾರಿಗಳು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಹೇಳಿದರು.

ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ಹಾಗೂ ಶಿವಜ್ಯೋತಿ ನಗರದಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ, ನಂತರ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಸೋಂಕು ದೃಢಪಟ್ಟವರನ್ನು ಮನೆಯಲ್ಲಿ ಇರಿಸದೆ ಮನವೋಲಿಸಿ ಆರೈಕೆ ಕೇಂದ್ರಗಳಿಗೆ ಕರೆತರಬೇಕು. ಒಂದೇ ಮನೆಯಲ್ಲಿ ನಾಲ್ಕೈದು ಜನರಿಗೆ ಪಾಸಿಟಿವ್ ಬಂದಿದ್ದರೆ ಅಂಥವರನ್ನು ಕೂಡಲೇ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು. ಸೋಂಕಿತರಿಗೆ ಶುಚಿಯಾದ ಮತ್ತು ಪೌಷ್ಟಿಕ ಆಹಾರ ನೀಡಿ ಕಾಲಕಾಲಕ್ಕೆ ಮಾತ್ರೆ ಕೊಟ್ಟು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಬೆಡ್, ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಇರಬೇಕು. ಕೋವಿಡ್ ಲಸಿಕೆ ಮತ್ತು ರೆಮ್‍ಡಿಸಿವಿರ್ ಚುಚ್ಚುಮದ್ದು ಕೊರತೆ ಉಂಟಾಗುವ ಪೂರ್ವದಲ್ಲಿಯೇ ಪರಿಶೀಲಿಸಿ ಅಗತ್ಯತೆಯ ಕುರಿತು ತಮಗೆ ಮಾಹಿತಿ ನೀಡಬೇಕು. ಲಾಕ್‍ಡೌನ್ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಅನವಶ್ಯಕವಾಗಿ ರಸ್ತೆಗಳಲ್ಲಿ ತಿರುಗಾಡುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಲಾಕ್‍ಡೌನ್ ನಿಯಮಗಳು ಪಾಲನೆ ಆಗುವಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ, ತಹಶೀಲ್ದಾರ್ ಮಂಜುನಾಥ ಭೋಗಾವತಿ, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ಕೋವಿಡ್ ನೋಡಲ್ ಅಧಿಕಾರಿ ಡಾ.ಜೀವನೇಶ್ವರಯ್ಯ, ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ, ಮುಖ್ಯವೈದ್ಯಾಧಿಕಾರಿ ಡಾ.ಹನುಮಂತರೆಡ್ಡಿ, ತಾಲ್ಲೂಕು ಪಂಚಾಯಿತಿ ಇಒ ಪವನಕುಮಾರ, ಡಿವೈಎಸ್‍ಪಿ ವಿಶ್ವನಾಥರಾವ್ ಕುಲಕರ್ಣಿ, ಸರ್ಕಲ್ ಇನ್‌ಸ್ಪೆಕ್ಟರ್‌ ಶ್ರೀಕಾಂತ, ಸಬ್‍ಇನ್‌ಸ್ಪೆಕ್ಟರ್‌ ವಿಜಯಕೃಷ್ಣ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.