ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈತಿಕತೆಯಿಂದ ಮತ ಚಲಾಯಿಸಿ: ಸಿಇಒ

Last Updated 30 ಮಾರ್ಚ್ 2019, 13:39 IST
ಅಕ್ಷರ ಗಾತ್ರ

ರಾಯಚೂರು: ಯಾವುದೇ ಅಮಿಷಗಳಿಗೆ ಒಳಗಾಗದೇ ನೈತಿಕತೆಯಿಂದ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಆಯೋಜಿಸಿದ್ದ ಮತದಾನ ಜಾಗೃತಿ ಕುರಿತು ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಜಾಪ್ರಭುತ್ವ ಉಳಿವಿಗಾಗಿ ಮತದಾನ ಮಾಡಬೇಕು. ಮತದಾನ ಹಕ್ಕನ್ನು ವ್ಯರ್ಥ ಮಾಡಬಾರದು. ಆದ್ದರಿಂದ 18 ವರ್ಷ ತುಂಬಿದ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಮೂರು ತಿಂಗಳಿನಿಂದ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಹೊಸ ಹೊಸ ಆಯಾಮಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಚಿತ್ರಕಲಾ ಪ್ರದರ್ಶನದ ಮೂಲಕ ಮತದಾರರಿಗೆ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶೇ 80ರಿಂದ 90ರಷ್ಟು ಮತದಾನದ ಗುರಿಯನ್ನು ಈ ಬಾರಿ ಹೊಂದಲಾಗಿದ್ದು, ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಯಲಕ್ಷ್ಮೀ ಮಾತನಾಡಿ, ಚಿತ್ರಕಲಾ ಪ್ರದರ್ಶನವನ್ನು ಮೂರು ಹಂತದಲ್ಲಿ ಹಮ್ಮಿಕೊಳ್ಳುವ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕಿ ಈರಬಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT