ಶುಕ್ರವಾರ, ಅಕ್ಟೋಬರ್ 18, 2019
28 °C

‘ಗೋಬ್ಯಾಕ್ ಸದಾನಂದಗೌಡ’ ರಾಯಚೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Published:
Updated:

ರಾಯಚೂರು: ಕೃಷಿ ವಿಶ್ವವಿದ್ಯಾಲಯದ ಎದುರು ಕೇಂದ್ರ ಸಚಿವ ಸದಾನಂದಗೌಡ ಅವರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ 'ಗೋ ಬ್ಯಾಕ್'  ಪ್ರತಿಭಟನೆ ನಡೆಸಿದರು. ಕೂಡಲೇ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ವಾಹನಗಳಲ್ಲಿ ಕರೆದೊಯ್ದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸುಸ್ಥಿರ ಅಭಿವೃದ್ಧಿ’ ಕುರಿತ ವಿಚಾರ ಸಂಕಿರಣದಲ್ಲಿ ಸಚಿವ ಸದಾನಂದಗೌಡ ಪಾಲ್ಗೊಳ್ಳಬೇಕಿತ್ತು. ಕೊಪ್ಪಳ ಜಿಲ್ಲೆ ಮುನಿರಾಬಾದ್‌ನಿಂದ ಸಚಿವರು ರಸ್ತೆಮಾರ್ಗದಲ್ಲಿ ಬರುತ್ತಿರುವ ಸಚಿವರು ರಾಯಚೂರು ತಲುಪುವ ಮೊದಲೇ ಪ್ರತಿಭಟನಾನಿರತರು ಘೋಷಣೆ ಕೂಗಿದರು.

ಪ್ರವಾಹ ಪರಿಹಾರ ನೀಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಹಾಗೂ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ ದೋತ್ರಬಂಡಿ, ಅಸ್ಲಂಪಾಷಾ ಪ್ರತಿಭಟನೆ ನೇತೃತ್ವ ವಹಿಸಿದ್ದರು.

Post Comments (+)