ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕಾನೂನು ಮಹಾವಿದ್ಯಾಲಯದ ಸುವರ್ಣ ಮಹೋತ್ಸವ 17 ರಂದು

Published 11 ಫೆಬ್ರುವರಿ 2024, 15:48 IST
Last Updated 11 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ರಾಯಚೂರು: ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್‌ಸಿಎಬಿ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಫೆ.17 ರಂದು ಬೆಳಿಗ್ಗೆ 10.30ಕ್ಕೆ ಎಲ್.ವಿ.ಡಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರಸಮಲ್ ಸುಖಾಣಿ ಹೇಳಿದರು.

ಕಾನೂನು ಮಹಾವಿದ್ಯಾಲಯ ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಂಡಿದೆ. ಇಲ್ಲಿ ಅಭ್ಯಾಸ ಮಾಡಿದವರು ಅನೇಕರು ವಕೀಲರು ಹಾಗೂ 15 ವಿದ್ಯಾರ್ಥಿಗಳು ನ್ಯಾಯಾಧೀಶರಾಗಿದ್ದಾರೆ. ಈ ಭಾಗದ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ತಾರನಾಥ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಹೈಕೋರ್ಟ್ ನ್ಯಾಯಮೂರ್ತಿ ಇ. ಎಸ್.ಇಂದಿರೇಶ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಜಯಪುರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ನಿರ್ಭಯಾನಂದ ಸರಸ್ವತಿ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಸಿ. ಬಸವರಾಜು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಾರುತಿ ಎಸ್. ಬಾಗಡೆ ಭಾಗವಹಿಸಿದ್ದಾರೆ. ಎಲ್. ವಿ. ಡಿ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಹಾಗೂ ಹಿರಿಯ ವಿಜ್ಞಾನಿ ಅನುರಾಧ ದೇಸಾಯಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಸಂಜೆ 6.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ  ಉದ್ಘಾಟಿಸಿಲಿದ್ದಾರೆ.  ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಆರ್. ಬಸನಗೌಡ ತುರ್ವಿಹಾಳ, ಡಾ.ಶಿವರಾಜ ಪಾಟೀಲ,  ಹಂಪನಗೌಡ ಬಾದರ್ಲಿ, ಜಿ. ಹಂಪಯ್ಯ ನಾಯಕ,  ಮಾನಪ್ಪ ಡಿ. ವಜ್ಜಲ,  ಕರೆಮ್ಮ ಜಿ. ನಾಯಕ , ಸಂಸದ ರಾಜಾ ಅಮರೇಶ್ವರ ನಾಯಕ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪೂರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಪವನಕುಮಾರ ಸುಖಾಣಿ, ಪ್ರಧಾನ ಕಾರ್ಯದರ್ಶಿ ನಂದಾಪೂರ ಶ್ರೀನಿವಾಸರಾವ್, ಅಂಬಾಪತಿ ಪಾಟೀಲ, ಪುರುಷೋತ್ತಮದಾಸ್ ಇನ್ನಾಣಿ, ಪದ್ಮಾ ಜೆ, ಉಮಾ, ಮಲ್ಲಿಕಾರ್ಜುನ, ವಸುಂದರ, ನಾರಾಯಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT