ಶಿಕ್ಷಕರಿಗೆ ಹೆಚ್ಚಿನ ಗೌರವ- ಪ್ರತಾಪಗೌಡ
ಸಾಮಾಜದಲ್ಲಿ ಶಿಕ್ಷಕರಿಗೆ ಇರುವ ಗೌರವ ಹಾಗೂ ಸ್ಥಾನಮಾನ ಯಾರಿಗೂ ಇಲ್ಲಾ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು. ಶಿಕ್ಷಕರು ತಮ್ಮ ಸ್ಥಾನಮಾನಗಳಿಗೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು. ಸರ್ಕಾರದ ಎಲ್ಲಾ ಸೌಲಭ್ಯಗಳು ಇದ್ದರು ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ. ಈ ಬಗ್ಗೆ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದರು. ಶಾಲೆ ತೆರೆಯುವ ಮೊದಲು ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಭರ್ತಿಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.