ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಕಲ್ಪಿಸುವಲ್ಲಿ ಸರ್ಕಾರ ವಿಫಲ

ಯುವಜನರ ಸಮಾವೇಶದಲ್ಲಿ ಡಾ.ಶಾರದಾ ಹುಲಿನಾಯಕ ಆರೋಪ
Last Updated 7 ಸೆಪ್ಟೆಂಬರ್ 2022, 2:29 IST
ಅಕ್ಷರ ಗಾತ್ರ

ರಾಯಚೂರು: ‘ಸರ್ಕಾರಗಳು ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ’ ಎಂದು ಸಾಮಾಜಿಕ ಹೋರಾಟಗಾರ್ತಿ ಡಾ.ಶಾರದಾ ಪಿ ಹುಲಿನಾಯಕ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಮಂಗಳವಾರ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯಿಂದ ನಿರುದ್ಯೋಗ ಹಾಗೂ ನೇಮಕಾತಿ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿ
ಯುವಜನರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು, ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ಮಾತನಾಡಿ, ರಾಜ್ಯದಲ್ಲಿ ಸುಮಾರು 44 ಇಲಾಖೆಗಳಲ್ಲಿ 3 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಹಲವು ಇಲಾಖೆಗಳಲ್ಲಿ ಶೇ 60ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಸಮಗ್ರ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿಲ್ಲ. ಸೆ.22ರಂದು ಬೆಂಗಳೂರಿನ ಸ್ಕೌಟ್ ಮತ್ತು ಗೈಡ್ಸ್ ಮೈದಾನದಲ್ಲಿ ರಾಜ್ಯಮಟ್ಟದ ಯುವಕರ ಸಮಾವೇಶ ಆಯೋಜಿಸಿದ್ದು ವಿವಿಧ ಜಿಲ್ಲೆಗಳಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಡಾ.ಹನುಮಂತ ಜಿ.ಎನ್ ಕುರ್ಡಿ, ವಿನೋದ ಕುಮಾರ್ ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿ ಹೋರಾಟವನ್ನು ರೂಪಿಸಲು ಹೊಸ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಡಾ. ಹನುಮಂತ ಜಿ.ಎನ್.ಕುರ್ಡಿ, ಕಾರ್ಯದರ್ಶಿಯಾಗಿ ರಾಮಚಂದ್ರಪ್ಪ, ಜಂಟಿ ಕಾರ್ಯದರ್ಶಿಯಾಗಿ
ವಿನೋದ್ ಕುಮಾರ್ ಮತ್ತು ಯಲ್ಲಪ್ಪ ಹಾಗೂ ಸದಸ್ಯರಾಗಿ ಜಾಫರ್, ಚನ್ನಪ್ಪ ,ಶಿವಪ್ಪ ಅಸ್ಕಿಹಾಳ್, ನಾಗೇಶ, ಬಸವರಾಜ, ಮಾರುತಿ, ಮೌನೇಶ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯ ಸಮಿತಿ ಸದಸ್ಯ ರಾಮಚಂದ್ರ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT