ಸಿಂಧನೂರು: ‘ತಾಲ್ಲೂಕಿನಲ್ಲಿ 3.40 ಲಕ್ಷ ಜನಸಂಖ್ಯೆ ಇದೆ. ಅದರಲ್ಲಿ ಶೇ 60ರಷ್ಟು ಜನರಿಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಆರ್ಥಿಕ ಆಸರೆ ಲಭಿಸಿದೆ’ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಟೌನ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಯಶೋಗಾಥೆ ಶಿಬಿರ’ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡ ಜನರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಸರ್ಕಾರದ ಆಯವ್ಯಯದಲ್ಲಿ ಪ್ರತಿವರ್ಷ ₹56 ಸಾವಿರ ಕೋಟಿ ಪಂಚ ಗ್ಯಾರಂಟಿಗಳಿಗೆ ಕಾಯ್ದಿರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ’ ಎಂದರು.

‘ವಿವಿಧ ಯೋಜನೆಗಳಿಂದ ರಾಜ್ಯದ 4.65 ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದು, ಪ್ರತಿ ಕುಟುಂಬಕ್ಕೆ ಕನಿಷ್ಠ ಪ್ರತಿ ತಿಂಗಳು ₹8 ಸಾವಿರ ಲಭಿಸುತ್ತಿರುವುದು ವಿಶಿಷ್ಟವಾಗಿದೆ. ಇಂಥ ಸಮಾಜ ಪರಿವರ್ತನಾ ಕಾರ್ಯಕ್ರಮವನ್ನು ಸಿದ್ದರಾಮಯ್ಯ ಹೊರತುಪಡಿಸಿ ಯಾವ ಮುಖ್ಯಮಂತ್ರಿಯೂ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.

ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಲ್ಲೂಕಿಗೆ ₹400 ಕೋಟಿ ₹83 ಲಕ್ಷ ಬಿಡುಗಡೆಯಾಗಿದೆ.
ಚಂದ್ರಶೇಖರ, ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಹಶೀಲ್ದಾರ್ ಅರುಣ್.ಎಚ್.ದೇಸಾಯಿ, ನಗರಸಭೆ ಪ್ರಭಾರ ಪೌರಾಯುಕ್ತೆ ಶೃತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲಕುಮಾರ ವೈ, ಆರ್ಡಿ ಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಇಂದಿರಾಗಾಂಧಿ ಸ್ತ್ರೀಶಕ್ತಿ ಒಕ್ಕೂಟದ ರಾಜ್ಯ ಘಟಕದ ಕಾರ್ಯದರ್ಶಿ ಶ್ರೀದೇವಿ ಶ್ರೀನಿವಾಸ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲಿಂಗನಗೌಡ, ಅಶೋಕ್ ಎನ್, ಜೆಸ್ಕಾಂ ಅಧಿಕಾರಿ ಶ್ರೀನಿವಾಸ ಸೇರಿದಂತೆ ಆರೋಗ್ಯ, ಸಾರಿಗೆ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಹಿರಿಯ ಮೇಲ್ವಿಚಾರಕಿ ಸುನಿತಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.