ಶನಿವಾರ, ಅಕ್ಟೋಬರ್ 19, 2019
27 °C

ಅಸಮಾನತೆ ಹೋಗಲಾಡಿಸುವುದು ಸರ್ಕಾರದ ಗುರಿ: ಕಾರಜೋಳ

Published:
Updated:

ರಾಯಚೂರು: ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿರ್ಧಾರದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ವಿಮೋಚನಾ ಹೋರಾಟವು ಭವ್ಯ ಇತಿಹಾಸವಾಗಿ ಉಳಿದಿದೆ. ಈ ಭಾಗ ಹಿಂದುಳಿದಿದ್ದು, ಪ್ರಾದೇಶಿಕ ಅಸಮಾನತೆ ಹೋಗಲಾಡಿಸುವುದು ಸರ್ಕಾರದ ಗುರಿಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾ ಪೊಲೀಸ್ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇದನ್ನೂ ಓದಿ: ಬೀದರ್‌: ‘ಕಲ್ಯಾಣ ಕರ್ನಾಟಕ ಉತ್ಸವ’ದಲ್ಲಿ ಸಚಿವರ ಭಾಷಣದ ಎಡವಟ್ಟು 

ನಿಜಾಮಶಾಹಿ ಆಡಳಿತದಿಂದ ಮುಕ್ತಿ ಪಡೆದು ಸ್ವತಂತ್ರರಾಗಲು ಈ ಭಾಗದ ಜನರು ಹದಿನಾಲ್ಕು ತಿಂಗಳು ಕಾಯಬೇಕಾಯಿತು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸಿ ಗೌರವಿಸಬೇಕಾದ ವಿಶೇಷ ದಿನ ಇದಾಗಿದೆ ಎಂದರು.

ಸರ್ಕಾರವು ಈ ಭಾಗದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಇದಕ್ಕಾಗಿ ಮೀಸಲಿದೆ ಎಂದು ತಿಳಿಸಿದರು.

LIVE: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 

ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಇದ್ದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ: ಹೆಸರಷ್ಟೇ ಸಾಕೆ?

Post Comments (+)