ಭಾನುವಾರ, ಆಗಸ್ಟ್ 9, 2020
25 °C

ಸರ್ಕಾರಿ ನೌಕರರಿಗೆ ಪ್ರತ್ಯೇಕ ವಾರ್ಡ್ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೋವಿಡ್–19 ಸೋಂಕಿಗೆ ಒಳಗಾಗಿರುವ ಸರ್ಕಾರಿ ಉದ್ಯೋಗಿ ಹಾಗೂ ಅವರ ಕುಟುಂಬಸ್ಥರ ಚಿಕಿತ್ಸೆಗಾಗಿ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಿದರು.

ರಾಜ್ಯದಾದ್ಯಂತ ಕೋವಿಡ್–19 ವ್ಯಾಪಕವಾಗಿ ಹರಡುತ್ತಿರುವ ವಿಷಮ ಪರಿಸ್ಥಿತಿಯಲ್ಲಿ ಕರ್ತವ್ಯ ನಿರತ ನೌಕರರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ದೈನಂದಿನ ಕಾರ್ಯನಿರ್ವಹಣೆಯಲ್ಲಿ ಕೋವಿಡ್ ಎಸ್ಓಎಸ್ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುತ್ತಿರುವ ಮಧ್ಯೆ ಸೋಂಕಿಗೆ ಒಳಲಾಗುತ್ತಿದ್ದಾರೆ.

ಸೋಂಕಿತರಿಗೆ ಸಕಾಲಕ್ಕೆ ಸೂಕ್ತ ಗುಣಮಟ್ಟದ ಚಿಕಿತ್ಸೆ ದೊರಕಿಸಬೇಕಿದೆ. ಮಂಡ್ಯ ಜಿಲ್ಲಾಡಳಿತ ಸೋಂಕಿತ ಸರ್ಕಾರಿ ನೌಕರರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ಮೀಸಲಿರಿಸಲು ಆದೇಶಿಸಿದ್ದು, ರಾಯಚೂರು ಜಿಲ್ಲಾಡಳಿತವೂ ಪ್ರತ್ಯೇಕ ವಾರ್ಡ್ ರಚಿಸಿ ಗುಣಮಟ್ಟ ಚಿಕಿತ್ಸೆ ನೀಡಿ ನೌಕರರ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು