ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅಭಿವೃದ್ಧಿಗೆ ನೌಕರರು ಒಗ್ಗೂಡಿ ಕೆಲಸ ಮಾಡಲಿ‘

ಉತ್ತಮ ನೌಕರ ಹಾಗೂ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
Last Updated 27 ಸೆಪ್ಟೆಂಬರ್ 2022, 16:16 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಅತಿ ಹಿಂದುಳಿದ ಜಿಲ್ಲೆಯಾಗಿದ್ದು ಸರ್ಕಾರಿ ನೌಕರರು ಒಗ್ಗೂಡಿ ಸಮನ್ವಯತೆಯಿಂದ ಕೆಲಸ ಮಾಡಿದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉತ್ತಮ ನೌಕರ ಹಾಗೂ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತ ಒಂದು ವರ್ಷದ ಬಳಿಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿಯಲು ಕಾರಣವಾಯಿತು. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಎಂದು ಘೋಷಿಸಿದ್ದು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಎಲ್ಲಾ ಸರ್ಕಾರಿ ನೌಕರರು ಜವಾಬ್ದಾರಿ ನಿರ್ವಹಿಸಬೇಕು. ಇಲಾಖೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸಲು ಅಗತ್ಯ ಸಹಕಾರ ನೀಡಲಾಗುವುದು. ಸರ್ಕಾರಿ ನೌಕರರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಜತೆಗೆ ಉತ್ತಮ ವ್ಯವಸ್ಥೆ ನಿರ್ಮಾಣವಾಗಲಿದೆ ಎಂದು ಹೇಳಿದರು.

ಶಾಸಕ ಬಸನಗೌಡ ದದ್ದಲ ಮಾತನಾಡಿ, ಸರ್ಕಾರಿ ನೌಕರರು ಈಗಾಗಲೇ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಸೇವಾ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಬೇಕು. ಇದರಿಂದ ನಿವೃತ್ತ ನೌಕರರಿಗೆ ಅನುಕೂಲವಾಗುತ್ತದೆ ಎಂದರು.

ಕೇಂದ್ರದ ವೇತನದಂತೆ ರಾಜ್ಯದ ಸರ್ಕಾರಿ ನೌಕರರಿಗೂ ವೇತನ ನೀಡಿದ್ದಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ನೆಮ್ಮದಿಯ ಜೀವನವನ್ನು ನಡೆಸಬಹುದಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.ಉತ್ತಮವಾಗಿ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಗರಸಭೆ ಅಧ್ಯಕ್ಷೆ ಲಲಿತಾ ಎ. ಕಡಗೋಲ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ, ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಶಂಕರಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭೀಮಪ್ಪ ನಾಯಕ, ಪ್ರದಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ, ಚಂದ್ರಶೇಖರ ಹಿರೆಮಠ, ಶ್ರೀಶೈಲಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT