ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ -ಶಿವರಾಜ ಪಾಟೀಲ

ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
Last Updated 17 ಸೆಪ್ಟೆಂಬರ್ 2021, 13:53 IST
ಅಕ್ಷರ ಗಾತ್ರ

ರಾಯಚೂರು: ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ. ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮ ಕೈಕೊಳ್ಳಲಾಗುವುದು ಎಂದು ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕಾಗೃಹದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ, ನೌಕರರ ಸಂಘದ ನವೀಕರಣ ಕಟ್ಟಡ ಉದ್ಘಾಟನೆ ಹಾಗೂ ರಾಜ್ಯಾದ್ಯಕ್ಷರಿಗೆ ಅಭಿನಂದನಾ ಹಾಗೂ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಎಲ್ಲ ಸರ್ಕಾರಿ ನೌಕರರ ಏಳಿಗೆಗಾಗಿ ಕಾರ್ಯನಿರ್ವಹಿಸುವ ಸಂಘದ ರಾಜ್ಯಾಧ್ಯಕ್ಷರ ಕಾರ್ಯ ನಿರಂತರ ಇರಲಿ. ಅಭಿವೃದ್ಧಿಗೆ ಆದ್ಯತೆ ನೀಡಬೇಕು. ರಾಜ್ಯದಾದ್ಯಂತ ಸಂಚರಿಸಿ ಅವರು ಕೆಲಸ ಮಾಡುತ್ತಿರುವುದು ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.

ನಗರದಲ್ಲಿ ₹10 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನವೀಕರಣ ಮಾಡಲಾಗಿದೆ. ಇದರಿಂದ ನೌಕರರಿಗೆ ಮತ್ತಷ್ಟು ಅನುಕೂಲವಾಗಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯಾಧ್ಯಕ್ಷ ಷಡಾಕ್ಷರಯ್ಯ ಮಾತನಾಡಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT