ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ಜನಪರ ಕಾರ್ಯಕ್ರಮ: ವೀರಲಕ್ಷ್ಮೀ

ಸರ್ಕಾರದ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ
Last Updated 20 ಡಿಸೆಂಬರ್ 2019, 14:30 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಮಾಡಿ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಶುಕ್ರವಾರದಿಂದ ಮೂರು ದಿನಗಳವರೆಗೆ ಆಯೋಜಿಸಿರುವ ‘ಸರ್ಕಾರದ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನ’ ಉದ್ಘಾಟಿಸಿ ಮಾತನಾಡಿದರು.

ಪ್ರವಾಹದ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಿ ಸಹಾಯಹಸ್ತ ನೀಡಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಕಲ್ಯಾಣವೇ ಸರ್ಕಾರದ ಧ್ಯೇಯ ಮತ್ತು ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡಬೇಕೆನ್ನುವುದೆ ಗುರಿಯಾಗಿದೆ. ಈಭಾಗದಲ್ಲಿ ಅಪೌಷ್ಟಿಕತೆ ನಿವಾರಣೆ ಮತ್ತು ಶಿಕ್ಷಣ ಫಲಿತಾಂಶ ಉತ್ತಮಗೊಳಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಆಯುಷ್ಮಾನ್ ಭಾರತ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಬಿಡುಗಡೆ ಮಾಡಿರುವ ಅನುದಾನ ವಿವರ ಒಳಗೊಂಡ ಛಾವಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.

ಕಲಬುರ್ಗಿಗೆ ವಿಮಾನ ಸೇವೆ ಪ್ರಾರಂಭ ಮತ್ತು ಪ್ರವಾಸೋದ್ಯಮ, ವಾಣಿಜೋದ್ಯಮ, ರಫ್ತು ಉದ್ಯಮಗಳ ಬೆಳವಣಿಗೆಗೆ ಪ್ರಯೋಜನವಾಗಲಿದೆ ಎನ್ನುವ ವಿವರಗಳಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಯಚೂರು ಘಟಕ ವ್ಯವಸ್ಥಾಪಕ ಫಾಲಾಕ್ಷಿ ಹರ್ತಿ, ಪತ್ರಕರ್ತರಾದ ವೆಂಕಟಸಿಂಗ್, ವೆಂಕಟೇಶ್ ಹೂಗಾರ್, ಸಾರಿಗೆ ಸಂಸ್ಥೆಯ ಸಿಬ್ಬಂದಿ, ಪ್ರಯಾಣಿಕರು, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT