ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ತ್ರೀ ಸಬಲೀಕರಣಕ್ಕಾಗಿ ಯೋಜನೆ ಜಾರಿ': ಸಚಿವ ಶ್ರೀರಾಮುಲು

Last Updated 26 ಜನವರಿ 2020, 12:10 IST
ಅಕ್ಷರ ಗಾತ್ರ

ರಾಯಚೂರು: ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿವೆಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತೀ ಶಕ್ತಿ ಒಕ್ಕೂಟದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ‘ಸ್ತ್ರೀ ಶಕ್ತಿ ಮಹಿಳಾ ಸಮಾವೇಶ–2020’ ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಎಂದರೇ ಗೌರವ, ಪೂಜ್ಯನೀಯ ಸ್ಥಾನವಿದೆ. ಮಹಿಳೆಯರಿಗೆ ಸಮಾನ ಸ್ಥಾನ ಕೊಡಬೇಕೆಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಬಚಾವೋ ಭೇಟಿ ಪಡಾವೋ ಸೇರಿದಂತೆ ಇನ್ನಿತರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರ ಏಳಿಗೆಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಕೇಂದ್ರ ಆರಂಭಿಸಲಾಗಿದೆ. ಈ ಭಾಗದಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಐರನ್ ಹಾಗೂ ಕ್ಯಾಲ್ಸಿಯಂ ಮಾತ್ರೆಗಳು ವಿತರಣೆಗಾಗಿ ₹15 ಕೋಟಿ ಬಿಡುಗಡೆಗೊಳಿಸಲಾಗಿದೆ. ಸ್ತ್ರೀಶಕ್ತಿ ಸಂಘಗಳು ಶಕ್ತಿವಂತರಾಗಲಿ ಎಂದು ಸರ್ಕಾರದಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ಸ್ತ್ರೀ ಶಕ್ತಿ ಸಂಘಟನೆಗಳ ಸ್ಥಾಪನೆಯಿಂದ ಮಹಿಳೆಯರು ಸಬಲರಾಗಿದ್ದಾರೆ. ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವಂತ ಉದ್ಯಮ ಸ್ಥಾಪಿಸಿ ಯಶಸ್ವಿ ಉದ್ಯಮಿಗಳಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ತ್ರೀ ಮೇಲಿನ ಶೋಷಣೆ, ಭ್ರೂಣ ಹತ್ಯೆಗಳು ನಿಲ್ಲಬೇಕು. ಜಿಲ್ಲೆಯಲ್ಲಿ ಸ್ತ್ರೀ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು. ಸ್ತ್ರೀಯರನ್ನು ಕೀಳಾಗಿ ಕಾಣಬಾರದು ಎಂದು ತಿಳಿಸಿದರು.

ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಲಾಯಿತು. ಮಹಿಳಾ ಸಂಘಗಳಿಂದ ವಿವಿಧ ಮಳಿಗೆಗಳು ತೆರೆಯಲಾಗಿತ್ತು.

ಶಾಸಕರಾದ ಡಾ.ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT