ರಾಯಚೂರು: ಜಿಲ್ಲೆಯಲ್ಲಿ ಘೋಷಣೆಯಾಗಿರುವ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ವೀಕ್ಷಕ ಸಿದ್ದಲಿಂಗಯ್ಯ ಎಸ್.ಹಿರೇಮಠ ತಿಳಿಸಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆ ಅಧಿಕಾರಿಗಳು (ಪಿಆರ್ಓ) ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು (ಎಪಿಆರ್ಓ)ಗಳಿಗೆ ಶನಿವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯು ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ, ಡಿಸೆಂಬರ್ 22 ರಂದು ಮೊದಲನೇ ಹಂತದಲ್ಲಿ ಹಾಗೂ ಡಿಸೆಂಬರ್ 27 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಆತ್ಮವಿಶ್ವಾಸದಿಂದ, ಚುನಾವಣಾ ಆಯೋಗದ ನಿರ್ದೇಶನದನ್ವಯ ಕಾರ್ಯನಿರ್ವಹಿಸಬೇಕು. ಆ ಮೂಲಕ ಜಿಲ್ಲೆಯ ಚುನಾವಣೆಯ ಯಶಸ್ವಿಗೊಳಿಸುವಂತೆ ಎಲ್ಲರೂ ಶ್ರಮಿಸುವಂತೆ ಹೇಳಿದರು.

ಮತದಾನದ ದಿನದಂದು ಯಾವುದೇ ಆಮಿಷಗಳು ಹಾಗೂ ಒತ್ತಡಗಳಿಗೆ ಮಣಿಯದೇ ಕಾರ್ಯನಿರ್ವಹಿಸಬೇಕು. ಚುನಾವಣಾ ಪ್ರಕ್ರಿಯೆಗಳ ಕುರಿತ ಸಮಸ್ಯೆಗಳಿದ್ದಲ್ಲೀ ಸಂಬಂಧಿದ ಮೇಲಧಿಕಾರಿಗಳ ಗಮನಕ್ಕೆ ತರಬೇಕು, ಮತದಾನಕ್ಕೆ ಒಂದು ದಿನ ಮುಂಚಿತವಾಗಿ ಆಯಾ ಗ್ರಾಮ ಪಂಚಾಯಿತಿಗಳಿಗೆ ನೇಮಿಸಿದ ಸಿಬ್ಬಂದಿಯು ಮತದಾನ ಕೊಠಡಿಯನ್ನು ಸಿದ್ದಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಬಾರಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು, ಆ ಮೂಲಕ ಕೊರೋನಾ ಸೋಂಕು ಹರಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಚುನಾವಣೆ ತರಬೇತಿದಾರ ಸದಾಶಿವಪ್ಪ ಅವರು ತರಬೇತಿ ನೀಡಿದರು.

ನೋಡೆಲ್ ಅಧಿಕಾರಿ ಮಹೇಂದ್ರಕುಮಾರ್, ತಹಶೀಲ್ದಾರ್ ಡಾ.ಹಂಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ ಹಾಗೂ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.