ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ಹಂತ: ಮತದಾನಕ್ಕೆ ಸಕಲ ಸಿದ್ಧತೆ

ಲಿಂಗಸುಗೂರು, ಸಿಂಧನೂರು ಹಾಗೂ ಮಸ್ಕಿ ತಾಲ್ಲೂಕು ಗ್ರಾಪಂ
Last Updated 26 ಡಿಸೆಂಬರ್ 2020, 13:38 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಭಾನುವಾರ ಮತದಾನ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಂಧನೂರು, ಲಿಂಗಸುಗೂರು ಹಾಗೂ ಮಸ್ಕಿ ತಾಲ್ಲೂಕಿನ ಗ್ರಾಮಗಳಲ್ಲಿ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತವು ಮಾಡಿದೆ.

ಒಟ್ಟು 80 ಗ್ರಾಮ ಪಂಚಾಯಿತಿಗಳ ಪೈಕಿ 76 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ನಾಲ್ಕು ಗ್ರಾಮ ಪಂಚಾಯಿತಿಗಳ ಒಟ್ಟು 77 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಮತದಾನಕ್ಕಾಗಿ ಒಟ್ಟು 639 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಂಧನೂರು ಮತ್ತು ಲಿಂಗಸುಗೂರು ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರ ಪೂರ್ವತಯಾರಿ ಮಾಡಿಕೊಳ್ಳುತ್ತಿರುವುದು ಕಂಡುಬಂತು.

ಮೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 215 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 1561 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 3160 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ. ಒಟ್ಟು 4.97,863 ಮತಗಳನ್ನು ಚಲಾವಣೆ ಮಾಡಲಿದ್ದಾರೆ.

ಸಿಂಧನೂರು ತಾಲ್ಲೂಕಿನ ಒಟ್ಟು 30 ಗ್ರಾಮ ಪಂಚಾಯಿತಿಗಳಲ್ಲಿ 626 ಸ್ಥಾನಗಳಿದ್ದು, ಅದರಲ್ಲಿ 89 ಅವಿರೋಧ ಆಯ್ಕೆಯಾಗಿದೆ. 537 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1378 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 1,99, 963 ಮತದಾರರಿದ್ದಾರೆ. 302 ಮತಗಟ್ಟೆಗಳಿದ್ದು, 1268 ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ಲಿಂಗಸುಗೂರು ತಾಲ್ಲೂಕಿನಲ್ಲಿ ಒಟ್ಟು 29 ಗ್ರಾಮ ಪಂಚಾಯಿತಿಗಳಲ್ಲಿ 531 ಸ್ಥಾನಗಳಿವೆ. ಅದರಲ್ಲಿ 75 ಅವಿರೋಧ ಆಯ್ಕೆಯಾಗಿದ್ದು 456 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 1116 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,68, 132 ಮತದಾರರಿದ್ದಾರೆ. 240 ಮತಗಟ್ಟೆಗಳಿದ್ದು, 1008 ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ಮಸ್ಕಿ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಿಗೆ 404 ಸ್ಥಾನಗಳಿಗಾಗಿ ಚುನಾವಣೆ ನಡೆಯುತ್ತಿದೆ. 51 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. 666 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,29, 768 ಮತದಾರರಿದ್ದಾರೆ. 194 ಮತಗಟ್ಟೆಗಳಿದ್ದು, 815 ಸಿಬ್ಬಂದಿ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪೊಲೀಸ್ ಬಂದೋಬಸ್ತ್: ಜಿಲ್ಲೆಯಲ್ಲಿ ಸುಗಮವಾಗಿ ಮತದಾನ ನಡೆಸಲು ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 113 ಸೂಕ್ಷ್ಮ, 526 ಸಾಮಾನ್ಯ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಲಳಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗೆ ಬಂದೋಬಸ್ತ್‌ಗಾಗಿ 52 ಪೊಲೀಸ್ ಅಧಿಕಾರಿಗಳನ್ನು, 981 ಪೊಲೀಸ್ ಸಿಬ್ಬಂದಿ, 84 ಗೃಹರಕ್ಷಕದಳದ ಸಿಬ್ಬಂದಿ (ಹೋಂ ಗಾರ್ಡ್ಸ್‌), ಇದರೊಂದಿಗೆ 37 ಮೊಬೈಲ್ ಸೆಕ್ಟರ್, 13 ಮೇಲ್ವಿಚಾರಣೆ ಮೊಬೈಲ್ ಸೆಕ್ಟರ್‌ಗಳಲ್ಲಿ ಅಧಿಕಾರಿಗಳು ಸೇರಿದಂತೆ 1117 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳ ತಪಾಸಣೆಗಾಗಿ ಎಂಟು ಕಡೆಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT