ಲಿಂಗಸುಗೂರು: ‘ಆನೆಹೊಸೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಬುಧವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಮೀನಾಬಿ ಮೋದಿನಸಾಬ್, ಉಪಾಧ್ಯಕ್ಷರಾಗಿ ರೇಣುಕಾ ಮೌನೇಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ಸುರೇಶಕುಮಾರ ಘೋಷಿಸಿದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿತ್ತು. ತಲಾ ಒಂದೊಂದೆ ನಾಮಪತ್ರ ಸಲ್ಲಿಕೆ ಆದ ಕಾರಣ 12 ಜನ ಸದಸ್ಯರ ಪೈಕಿ 8 ಸದಸ್ಯರು ಹಾಜರಿದ್ದ ಸಭೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರೇಶ ಬನ್ನಿಗೋಳ ಸೇರಿದಂತೆ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.