ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡವಿಭಾವಿ ಗ್ರಾ.ಪಂ: ಗೀತಮ್ಮ ಅಧ್ಯಕ್ಷೆ

Last Updated 9 ಜುಲೈ 2022, 6:18 IST
ಅಕ್ಷರ ಗಾತ್ರ

ಮಸ್ಕಿ: ತಾಲ್ಲೂಕಿನ ಅಡವಿಭಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗೀತಮ್ಮ ಬಸವರಾಜ ಅವಿರೋಧವಾಗಿ ಆಯ್ಕೆಯಾದರು.

‘15 ಸದಸ್ಯ ಬಲದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ಗುರುವಾರ ಚುನಾವಣೆ ನಡೆಯಿತು. 9 ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಗೀತಮ್ಮ ಬಸವರಾಜ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು’ ಎಂದು ಚುನಾವಣಾಧಿಕಾರಿಯೂ ಆಗಿರುವ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪವನಕುಮಾರ ಪ್ರಕಟಿಸಿದರು. ಪಿಡಿಒ ಸುರೇಶ ಪಾಟೀಲ, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT