ಎಲ್ಲರೂ ಪರಿಸರ ಕಾಳಜಿ ತೋರಿಸಿ

ಭಾನುವಾರ, ಜೂನ್ 16, 2019
22 °C
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶ ಬೈಲೂರು ಶಂಕರರಾಮ್ ಸಲಹೆ

ಎಲ್ಲರೂ ಪರಿಸರ ಕಾಳಜಿ ತೋರಿಸಿ

Published:
Updated:
Prajavani

ರಾಯಚೂರು: ಇತ್ತಿಚಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲಿದೆ. ಇದರಿಂದ ಸಾರ್ವಜನಿಕ ಜೀವನಕ್ಕೆ ಬಹಳ ತೊಂದರೆಯಾಗುತ್ತಲಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಕಾಳಜಿ ತೊರಿಸಬೇಕಾಗಿದೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯದೀಶರಾದ ಬೈಲೂರು ಶಂಕರರಾಮ್ ಹೇಳಿದರು.

ಜಿಲ್ಲಾ ಕಾರಾಗೃಹದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿಯನ್ನು ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಒಂದು ಗಿಡ ನಾಶವಾದರೆ, ಅದಕ್ಕೆ ಪರ್ಯಾಯವಾಗಿ ಹತ್ತು ಗಿಡಗಳನ್ನು ಹಾಕಬೇಕು. ಹೆಚ್ಚು ಗೀಡಗಳನ್ನು ಬೆಳೆಯುವುದುರಿಂದ ಉತ್ತಮ ಪರಿಸರ ಸಿಗುತ್ತದೆ. ಸಕಾಲಕ್ಕೆ ಮಳೆ ಬರುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಗಿಡಗಳನ್ನು ತಮ್ಮ ಮನೆಯ ಸುತ್ತ ಶಾಲೆ ಕಾಲೇಜುಗಳಲ್ಲಿ ಮತ್ತು ಸಂಘ ಸಂಸ್ಥೆಗಳಲ್ಲಿ ಬೆಳೆಸುವುದರ ಮೂಲಕ ಪರಿಸರ ಉಳಿಸಿ ಬೆಳೆಸಬೇಕು. ಪರಿಸರ ಕಾಪಾಡುವುದು ಎಲ್ಲರ ಅದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಗಿಡಗಳನ್ನು ಹೆಚ್ಚು ಬೆಳೆಸುವುದರಿಂದ ಆಗುತ್ತಿರುವ ಲಾಭಗಳು ಮತ್ತು ಅರಣ್ಯ ನಾಶವಾಗುತ್ತಿರುವುದರಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿ.ಎಸ್ ನಾಡಗೌಡ ಮಾತನಾಡಿ, ಕಾರಾಗೃಹದಲ್ಲಿ ಹಾಕಿದ ಸಸಿಗಳ ಸಂರಕ್ಷಣೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಅಚ್ಚುಕಟ್ಟಾಗಿ ಮಾಡಬೇಕೆಂದು ಹೇಳಿದರು.

ಜಿಲ್ಲಾ ನ್ಯಾಯಲಯದ ವಿವಿಧ ನ್ಯಾಯಧೀಶರು ಇದ್ದರು. ಜಿಲ್ಲಾ ಅರಣ್ಯ ಅಧಿಕಾರಿಗಳಾದ ಶಿವಯ್ಯ,  ಅರಣ್ಯ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಬೊರಲೆ , ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ, ಜಿಲ್ಲಾ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !