‘ಉತ್ತಮ ಪರಿಸರಕ್ಕಾಗಿ ಮರ ಬೆಳೆಸಿ’

ಗುರುವಾರ , ಜೂಲೈ 18, 2019
29 °C

‘ಉತ್ತಮ ಪರಿಸರಕ್ಕಾಗಿ ಮರ ಬೆಳೆಸಿ’

Published:
Updated:
Prajavani

ರಾಯಚೂರು: ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಜಿಲ್ಲಾ ಪರಿಸರ ಸಂರಕ್ಷಣೆ ಅಧಿಕಾರಿ ಎಂ.ನಟೇಶ ಹೇಳಿದರು.

ತಾಲ್ಲೂಕಿನ ಸಿಂಗನೋಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಸಿಂಗನೋಡಿ ಸರ್ಕಾರಿ ಪ್ರೌಢಶಾಲೆಯಿಂದ ಗುರುವಾರ ಆಯೋಜಿಸಿದ್ದ ಜಾಗೃತಿ ಜಾಥಾ, ಸಸಿ ನೆಡುವ ಕಾರ್ಯಕ್ರಮ ಮತ್ತು ಮಕ್ಕಳಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

ವಾತಾವರಣದಲ್ಲಿ ತಾಪಮಾನ ಕಡಿಮೆಗೊಳಿಸಲು ಸಾಧ್ಯವಾಗದಿದ್ದರೆ ಮುಂದೊಂದು ದಿನ ಸಸಿಯನ್ನು ತಲೆಮೇಲಿಟ್ಟುಕೊಂಡು ತಿರುಗಾಡಬೇಕಾಗುತ್ತದೆ. ಇಂತಹ ದಿನಗಳು ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದರು.

ಪ್ರಕೃತಿ ವಿಕೋಪಕ್ಕೆ ಸಿಲುಕಿ ರೋಗ ರುಜಿನುಗಳಿಗೆ ಒಳಗಾಗಿದ್ದು, ಪರಿಸರ ಸಂರಕ್ಷಣೆಗೆ ಪ್ರಯತ್ನಿಸಬೇಕು. ಉತ್ತರ ಪರಿಸರ ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಬಸಪ್ಪ ಗದ್ದಿ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತ ಸೈಯದ್ ಹಪೀಜುಲ್ಲಾ, ಮಾಲಿನ್ಯ ನಿಯಂತ್ರಣ ಮಂಡಳಿಯ ತಾಂತ್ರಿಕ ನೌಕರ ರಾಜಕುಮಾರ, ಬಸವರಾಜ, ಶಿಕ್ಷಕ ಶ್ರೀಶೈಲ ರಾಜೇಂದ್ರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !