ರಾಯಚೂರು: ‘ಜಿಲ್ಲೆಯಲ್ಲಿ ಫೆ.5ರಿಂದ ಫೆ.7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರಲ್ಲಿ ಫೆ.07ರಂದು ಹಮ್ಮಿಕೊಂಡ ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಾವೇಶದ ಸಿದ್ಧತೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿನ ಗ್ಯಾರಂಟಿ ಯೋಜನೆಯಗಳ ಫಲಾನುಭವಿಗಳ ಯಶೋಗಾಥೆ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅದು ಇತರರಿಗೆ ಪ್ರೇರಣೆಯಾಗಬೇಕು. ಮುಖ್ಯವಾಗಿ ಗ್ಯಾರಂಟಿ ಯೋಜನೆಗಳ ಆಶಯ, ಆಯಾ ಯೋಜನೆಗಳ ಬಗ್ಗೆ ಜನತೆಗೆ ತಿಳಿಸಲು ಅರ್ಹರು ಈ ಯೋಜನೆಯ ವ್ಯಾಪ್ತಿಗೆ ಬರಬೇಕು ಎನ್ನುವ ಪ್ರಮುಖ ಉದ್ದೇಶದೊಂದಿಗೆ ಫೆ.07ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ತಾಲ್ಲೂಕುವಾರು ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಸ್ತುತ ಅವಧಿವರೆಗೂ ಸಾಧಿಸಿರುವ ಪ್ರಗತಿಯ ವಿವರಗಳ ಮಾಹಿತಿಯನ್ನು ಸಾಕ್ಷ್ಯಚಿತ್ರಗಳ ಮೂಲಕ ಪ್ರದರ್ಶಿಸುವ ಕಾರ್ಯ ಮಾಡಬೇಕು’ ಎಂದರು.

‘ಜಿಲ್ಲೆಯ ವಿವಿಧೆಡೆ ಇರುವ ವಿವಿಧ ಗ್ಯಾರಂಟಿ ಯೋಜನೆಗಳ ಸಾಧಕ ಫಲಾನುಭವಿಗಳನ್ನು ಕೂಡಲೇ ಗುರುತಿಸಬೇಕು. ಪ್ರತಿ ತಾಲ್ಲೂಕಿನಿಂದ ಕನಿಷ್ಠ 25 ಸಾಧಕ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸುವ ಕಾರ್ಯ ಮಾಡಬೇಕು. ಈ ಕಾರ್ಯಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಆದ್ಯತೆ ನೀಡಿ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಸಾಧಕ ಫಲಾನುಭವಿಗಳ ಅಭಿಪ್ರಾಯದ ವಿಡಿಯೊ ಪ್ರದರ್ಶಿಸಬೇಕು. ಗ್ಯಾರಂಟಿ ಯೋಜನೆಗಳ ಯಶೋಗಾಥೆಯ ಕುರಿತು ನಾಟಕ ಪ್ರದರ್ಶನ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ತುರ್ವಿಹಾಳ, ಹನುಮಂತಪ್ಪ ಜಾಲಿಬೆಂಚಿ, ಸದಸ್ಯರಾದ ಲಕ್ಷ್ಮಣ ಜ್ಯೋತಿ, ಮೆಹೆಬೂಬ್ ಸಾಬ್, ವೆಂಕಟೇಶ, ಆದನಗೌಡ, ಎಚ್.ಬಸವರಾಜ, ಶೇಖರಪ್ಪ ಯಾದವ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನಕುಮಾರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.