ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

Last Updated 26 ಅಕ್ಟೋಬರ್ 2021, 2:44 IST
ಅಕ್ಷರ ಗಾತ್ರ

ರಾಯಚೂರು: ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಸಮಸ್ಯೆ ಬಗೆಹರಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಸಿಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂಶಿಕ್ಷಕರು ಕೈಗೆ ಕಪ್ಪುಪಟ್ಟಿ ಧರಿಸಿ ನಗರದ ಸರ್ಕಾರಿ ನೌಕರರ ಭವನದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯವರೆಗೂ ಕಪ್ಪು ಪಟ್ಟಿ ಧರಿಸಿ ಡಿವೈಪಿಸಿ ಸುಜಾತಾ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಕೃಪಾಂಕ ಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಸೆಳೆಯಲು ಅಕ್ಟೋಬರ್ 4ರಿಂದ ತರಗತಿ ಬಹಿಷ್ಕಾರ ಮಾಡಿದ್ದು ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಮಕ್ಕಳಿಗೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ನವೆಂಬರ್ 11ರಿಂದ 18ರವರೆಗೆ ಸ್ಯಾಟ್ಸ್(ಎಸ್‌ಎಟಿಎಸ್) ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಸರ್ಕಾರಕ್ಕೆ ಅಸಹಕಾರ ನೀಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ, ಸುರೇಶ ಕುರ್ಡಿ, ಸುಧಾ ಬಿರಾದಾರ್, ಹನುಮಂತಪ್ಪ, ರಂಗನಾಥ, ಉಮಾದೇವಿ, ತನುಜಾ ಸೇರಿದಂತೆ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT