ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯದಲ್ಲಿ ಗುರು ವೈಭವೋತ್ಸವ ಇದೇ 11ರಿಂದ 16ರವರೆಗೆ

Published 6 ಮಾರ್ಚ್ 2024, 20:43 IST
Last Updated 6 ಮಾರ್ಚ್ 2024, 20:43 IST
ಅಕ್ಷರ ಗಾತ್ರ

ರಾಯಚೂರು: ಶ್ರೀರಾಘವೇಂದ್ರ ಗುರುಸಾರ್ವಭೌಮರ 403ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 429 ವರ್ಧಂತಿ ಉತ್ಸವದ ಅಂಗವಾಗಿ ಮಾರ್ಚ್‌ 11ರಿಂದ 16ರವರೆಗೆ ಮಂತ್ರಾಲಯ ಮಠದಲ್ಲಿ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ನಡೆಯಲಿದೆ.

ಶ್ರೀಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಜ್ಞಾನಯಜ್ಞ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಮಾ.12ರಂದು ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ರಾಯರ ಪಾದುಕೆಗಳ ಪಟ್ಟಾಭಿಷೇಕ, ಮಾ.16ರಂದು ವರ್ಧಂತಿ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ತಿರುಪತಿಯ ಶ್ರೀನಿವಾಸನ ಪ್ರಸಾಸದ ರೂಪವಾಗಿ ಶೇಷವಸ್ತ್ರ ಸಮರ್ಪಣೆ ಮಾಡಲಿದ್ದಾರೆ. ಚೆನ್ನೈನ ಶ್ರೀ ರಾಘವೇಂದ್ರ ಸ್ವಾಮಿಗಳ ನಾದಾಹಾರ ಸೇವಾ ಸಮಿತಿಯ ಕಲಾವಿದರು ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಉತ್ಸವದ ನಿಮಿತ್ತ ಸಾಧಕರಿಗೆ ಕೊಡಲಾಗುವ ಶ್ರೀರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್, ವಕೀಲರಾದ ಎಸ್‌.ಕೆ.ಪುರೋಹಿತ, ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ನ್ಯಾಯಮೂರ್ತಿಗಳು, ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT