ಬುಧವಾರ, ಸೆಪ್ಟೆಂಬರ್ 23, 2020
24 °C

‘ಸಿದ್ದರಾಮಯ್ಯ ಕಂಡರೆ ಎಚ್‌.ವಿಶ್ವನಾಥಗೆ ಅಸೂಯೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಎಚ್‌. ವಿಶ್ವನಾಥ ಅವರಿಗೆ ಅಸೂಯೆ ಇದೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಕುರಿತು ಮೊದಲಿನಿಂದಲೂ ಟೀಕೆ ಟಿಪ್ಪಣೆ ಮಾಡುತ್ತಾ ಬರುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಂದಾಯ ಇಲಾಖೆಯ ಪ್ರಗತಿಯ ಪರಿಶೀಲನೆ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಮ್ಮಿಶ್ರ ಸರ್ಕಾರವು ಸಿದ್ದರಾಮಯ್ಯ ಅವರಿಂದಾಗಿ ಅಸ್ಥಿರವಾಗಿಲ್ಲ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲು ಸಿದ್ದರಾಮಯ್ಯ ಕಾರಣ, ಅವರಿಂದಾಗಿಯೇ ಸರ್ಕಾರ ಸ್ಥಿರವಾಗಿ ಮುನ್ನಡೆಯುತ್ತಿದೆ. ಶಾಸಕ ಆನಂದಸಿಂಗ್‌ ಅವರ ರಾಜೀನಾಮೆಗೆ ವೈಯಕ್ತಿಕ ಕಾರಣವಿದೆ. ಬೇಡಿಕೆಗಳನ್ನು ಪರಿಶೀಲಿಸುವ ಭರವಸೆಯನ್ನು ಮುಖಂಡರು ನೀಡಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಮುಖಂಡರ ಪ್ರಯತ್ನ ಫಲಿಸುವುದಿಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು